October 18, 2026
Sunday, October 18, 2026
spot_img

ನಮ್ಮ ಮೆಟ್ರೋ-ನಿಮ್ಮ ರಾಜಕೀಯ: ಶ್ವೇತಪತ್ರಕ್ಕೆ ಆಗ್ರಹಿಸಿ ತೇಜಸ್ವಿ ಸೂರ್ಯ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಮೆಟ್ರೋ ದರ ಏರಿಕೆ ವಿಚಾರ ಈಗ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ದರ ಏರಿಕೆ ಪ್ರಸ್ತಾಪಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಆರ್‌ವಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ‘ಖಾಲಿ ಟ್ರಂಕ್’ ಪ್ರದರ್ಶಿಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಿನೂತನವಾಗಿ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಆರ್ಥಿಕವಾಗಿ ಹಳ್ಳ ಹಿಡಿದಿದೆ ಎಂದು ಆರೋಪಿಸಿದ ಸೂರ್ಯ, ತಾವು ಹಿಡಿದಿದ್ದ ಖಾಲಿ ಟ್ರಂಕ್ ರಾಜ್ಯದ ಸದ್ಯದ ಖಜಾನೆಯ ಸ್ಥಿತಿಯನ್ನು ಬಿಂಬಿಸುತ್ತದೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಸರ್ಕಾರವು ರಾಜ್ಯದ ಹಣಕಾಸು ಪರಿಸ್ಥಿತಿಯ ಬಗ್ಗೆ ತಕ್ಷಣವೇ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:

ಸರ್ಕಾರ ಮೆಟ್ರೋಗೆ ನೀಡಬೇಕಾದ ಆರ್ಥಿಕ ನೆರವನ್ನು ಸ್ಥಗಿತಗೊಳಿಸಿರುವುದರಿಂದಲೇ ಸಂಸ್ಥೆಯು ದರ ಏರಿಕೆಯ ಹಾದಿ ಹಿಡಿದಿದೆ ಎಂದು ಅವರು ದೂರಿದರು.

ಈ ಪ್ರತಿಭಟನೆಯಲ್ಲಿ ಶಾಸಕ ರಾಮಮೂರ್ತಿ ಅವರು ಕೂಡ ಭಾಗವಹಿಸಿದ್ದರು. ಮೆಟ್ರೋ ನಿಲ್ದಾಣದಲ್ಲಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ರಾಮಮೂರ್ತಿ ಅವರನ್ನು ವಶಕ್ಕೆ ಪಡೆದರು.

Must Read