ಹೊಸದಿಗಂತ ಡಿಜಿಟಲ್ ಡೆಸ್ಕ್;
ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದರೆ ಮತ್ತು 30 ದಿನಗಳಿಗಿಂತ ಹೆಚ್ಚು ಜೈಲು ಶಿಕ್ಷೆ ಅನುಭವಿಸಿದ್ದರೆ ಅವರನ್ನು ಪದಚ್ಯುತಗೊಳಿಸುವ ನಿಬಂಧನೆಯೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಹೊಸ ಮಸೂದೆಯನ್ನು ಮಂಡಿಸಿದ್ದಾರೆ.
ಸಚಿವರು ವಿಧೇಯಕ ಮಂಡಿಸುತ್ತಿದ್ದಂತೆ ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ಮಸೂದೆಗಳ ಪ್ರತಿಗಳನ್ನು ಹರಿದು ಹಾಕಿ ಅಮಿತ್ ಶಾ ಮೇಲೆ ಎಸೆದರು.
ಎಐಎಂಐಎಂನ ಅಸಾದುದ್ದೀನ್ ಓವೈಸಿ ಮತ್ತು ಕಾಂಗ್ರೆಸ್‌ನ ಮನೀಷ್ ತಿವಾರಿ ಮತ್ತು ಕೆ ಸಿ ವೇಣುಗೋಪಾಲ್ ಸೇರಿದಂತೆ ಸೇರಿದಂತೆ ಹಲವು ವಿರೋಧ ಪಕ್ಷಗಳ ಸದಸ್ಯರು ಮಸೂದೆ ವಿರುದ್ಧ ಮಾತನಾಡಿದರು. ಉದ್ದೇಶಿತ ವಿಧೇಯಕ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.