ಹೊಸದಿಗಂತ ಡಿಜಿಟಲ್ ಡೆಸ್ಕ್;
ಒಳ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೊಕದ್ದಮೆಗಳನ್ನು ಸರ್ಕಾರ ಹಿಂಪಡೆಯಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ವಿಪಕ್ಷಗಳ ನಾಯಕರ ಪ್ರಶ್ನೆಗೆ ಉತ್ತರಿಸಿದ ಸಿದ್ಧರಾಮಯ್ಯ ಅವರು, ಏನಾದರೂ ಬದಲಾವಣೆ ಮಾಡಬೇಕಾದ್ರೆ ಮುಂದಿನ ಹಂತದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.