ಒಳಮೀಸಲಾತಿ ಜಾರಿಗೆ ನಿರ್ಧಾರ: ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕಲ್ಪಿಸಾಲು ಸರಕಾರ ಮುಂದಾಗಿದ್ದು, ಎಸ್​ ಸಿ ಬಲಗೈ ಹಾಗೂ ಎಡಗೈ ಸಮುದಾಯಗಳಿಗೆ ಸಮಾನವಾಗಿ ಶೇ.6ರಷ್ಟು ಮೀಸಲಾತಿ. ಇನ್ನು ಸ್ಪೃಶ್ಯ ಜಾತಿಗಳಿಗೆ ಶೇ.5ರಷ್ಟು ಮೀಸಲಾತಿಗೆ ತೀರ್ಮಾನಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲೇ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ, ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಎಡಗೈ ಸಮುದಾಯಕ್ಕೆ 6%, ಬಲ ಸಮುದಾಯಕ್ಕೆ 6% ಹಾಗೂ ಸ್ಪೃಶ್ಯ ಸಮುದಾಯಕ್ಕೆ ಶೇ.5ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನ ಮಾಡಲಾಗಿದೆ. ನ್ಯಾ.ನಾಗಮೋಹನ್‌ ದಾಸ್ ವರದಿಯ ಶಿಫಾರಸುಗಳನ್ನು ಕೆಲ ಮಾರ್ಪಾಡುಗಳೊಂದಿಗೆ ಒಳ ಮೀಸಲಾತಿ ಕಲ್ಪಿಸಲಾಗಿದೆ. A, B, C ಎಂದು ವರ್ಗೀಕರಣ ಮಾಡಿ ಮೀಸಲಾತಿ ಹಂಚಲಾಗಿದ್ದು, ಒಳ ಮೀಸಲಾತಿ ಹೋರಾಟದ ಮೊಕದ್ದಮೆ ಹಿಂಪಡೆಯಲೂ ತೀರ್ಮಾನಿಸಲಾಗಿದೆ. ಈ ಮೂಲಕ ದಶಗಳ ಹೋರಾಟಕ್ಕೆ ನಮ್ಮ ಸರ್ಕಾರ ನ್ಯಾಯ ಒದಗಿಸಿದೆ ಎಂದರು.

ಇನ್ನು ಸಿಎಂ ಮಾತು ಮುಗಿಯುತ್ತಿದ್ದಂತೆಯೇ ವಿಪಕ್ಷ ನಾಯಕ ಆರ್ ಅಶೋಕ್ ಎದ್ದು ನಿಂತು ಮೀಸಲಾತಿ ಜಾರಿ ಬಗ್ಗೆ ಮಾತನಾಡಲು ಪಟ್ಟು ಹಿಡಿದರು. ಈಗ ಚರ್ಚೆ ಮಾಡಲು ಅವಕಾಶ ಇಲ್ಲ. ಸಿಎಂ ವಾಕೌಟ್ ಮಾಡಿಲ್ಲ. ವಿಧಾನ ಪರಿಷತ್ತಿನಲ್ಲಿ ಉತ್ತರ ಇದೆ. ಹೀಗಾಗಿ ಅಲ್ಲಿಗೆ ಹೋಗಿದ್ದಾರೆ ಎಂದು ಸ್ಪೀಕರ್ ಹೇಳಿದರು. ಈ ವೇಳೆ ಪ್ರಶ್ನೆಗೆ ಅವಕಾಶ ಇದೆ ಎಂದು ಬಿಜೆಪಿ ಸದಸ್ಯ ಸುನಿಲ್ ಕುಮಾರ್ ನಿಯಮದ ಪುಸ್ತಕ ಓದಿದರು. ಪ್ರಶ್ನೆ ಕೇಳಲು ಅವಕಾಶ ಇಲ್ಲ ಅಂದರೆ ಸರ್ಕಾರ ಏನೋ ಮುಚ್ಚಿಡಲು ಮುಂದಾಗಿದೆ. ಸಿಎಂ ಇಲ್ಲ ಅಂದರೆ ನಮಗೆ ಡಿಕೆ ಶಿವಕುಮಾರ್ ಸಿಎಂ .ಅವರಿಗೆ ಕೊಡುತ್ತೇವೆ. ಅನುಮತಿ ಕೊಡಿ ಎಂದು ವಿಪಕ್ಷ ನಾಯಕ ಅಶೋಕ್ ಪಟ್ಟು ಹಿಡಿದರು.

ಪರಿಷತ್ ನಲ್ಲೂ ಒಳ ಮೀಸಲಾತಿ ಜಾರಿ ಬಗ್ಗೆ ತಿಳಿಸಿದ ಸಿಎಂ
ಇನ್ನು ಈ ಒಳಮೀಸಲಾತಿ ಬಗ್ಗೆ ವಿಧಾನಸಭೆಯಲ್ಲಿ ಉತ್ತರ ನೀಡದ ಬಳಿಕ ವಿಧಾನ ಪರಿಷತ್ ನಲ್ಲೂ ಸಹ ಪ್ರಸ್ತಾಪ ಮಾಡಿದ್ದು, ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆ ಸರ್ವೋಚ್ಚ ನ್ಯಾಯಾಲಯವು ರಾಜ್ಯಗಳ ವಿವೇಚನೆಗೆ ಬಿಟ್ಟಿತ್ತು.ಒಳ ಮೀಸಲಾತಿ ವರ್ಗೀಕರಣ ರಾಜ್ಯ ಸರ್ಕಾರಗಳಿಗೆ ಸಾಂವಿಧಾನಿಕವಾಗಿ ಬಂದ ಅಧಿಕಾರ ಎಂಬುದನ್ನು ಸುಪ್ರಿಂ ಕೋರ್ಟ್ ಹೇಳಿದೆ. 11-11-2024ರಂದು ರಂದು ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಏಕ ಸದಸ್ಯ ಆಯೋಗ ರಚನೆ ಮಾಡಲಾಯಿತು. ನಾಗಮೋಹನ್ ದಾಸ್ ಆಯೋಗ 101 ಪರಿಶಿಷ್ಟ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಿದೆ. ಆದ್ರೆ, ಕೆಲವು ಮಾರ್ಪಾಡು ಮಾಡಿ ವರದಿಯನ್ನು ಅಂಗೀಕರಿಸಿದ್ದೇವ. ಬಲಗೈ ಸಮೂಹಕ್ಕೆ 6% ಮೀಸಲಾತಿ, ಎಡಗೈ ಸಮೂಹಕ್ಕೆ 6% ಮೀಸಲಾತಿ ಕಲ್ಪಿಸಿ ಕ್ಯಾಬಿನೆಟ್ ನಲ್ಲಿ ತೀರ್ಮಾನ ಮಾಡಿದ್ದೇವೆ. ಇನ್ನು ಸ್ಪೃಶ್ಯ ಜಾತಿಗಳಿಗೆ ಶೆ.4ರಷ್ಟು ಮೀಸಲಾತಿ ನೀಡುವ ಬಗ್ಗೆ ನಾಗಮೋಹನ್ ದಾಸ್ ಶಿಫಾರಸು‌ ಮಾಡಿದ್ದರು. ಕೆಲವು ತಾಂತ್ರಿಕ ಕಾರಣಗಳಿಂದ ಒಂದೇ ಗುಂಪಿಗೆ ಸೇರಿಸಿ ವರ್ಗ- ಸಿ ಗೆ 5% ಮೀಸಲಾತಿ ನೀಡಲು ನಿರ್ಧರಿಸಿದ್ದೇವೆ. ಸಮಾನತೆ ನ್ಯಾಯ ಸಮ್ಮತೆ ಖಚಿತಪಡಿಸಿಕೊಳ್ಳಲು ಮಾರ್ಪಾಡು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!