ಮಾಜಿ ಉಪ ರಾಷ್ಟ್ರಪತಿ ಏಕೆ ಕಾಣಿಸಿಕೊಳ್ಳುತ್ತಿಲ್ಲ? ಏಕೆ ಮೌನ?: ರಾಹುಲ್ ಗಾಂಧಿ ಪ್ರಶ್ನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ರಾಜೀನಾಮೆ ನೀಡಿದ ನಂತರ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ರಾಜೀನಾಮೆ ಪ್ರಹಸನವನ್ನು ಉಲ್ಲೇಖಿಸಿ ಮಾತನಾಡುತ್ತಾ , ಜಗದೀಪ್‌ ಧನ್‌ಕರ್‌ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನ, ಕೆಸಿ ವೇಣುಗೋಪಾಲ್ ಜಿ ನನಗೆ ಕರೆ ಮಾಡಿ, ಉಪರಾಷ್ಟ್ರಪತಿ ಹೋಗಿ ಬಿಟ್ಟರು ಎಂದು ಹೇಳಿದರು. ಅವರು ಏಕೆ ರಾಜೀನಾಮೆ ನೀಡಿದ್ದಾರೆ ಎಂಬುದರ ಹಿಂದೆ ಒಂದು ದೊಡ್ಡ ಕಥೆ ಇದೆ. ನಿಮ್ಮಲ್ಲಿ ಕೆಲವರಿಗೆ ಇದು ತಿಳಿದಿರಬಹುದು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಆದರೆ ರಾಹುಲ್‌ ಗಾಂಧಿ ಅವರು ಮಾತಿನ ಮಧ್ಯೆ ‘ಉಪರಾಷ್ಟ್ರಪತಿ ಹೋಗಿಬಿಟ್ಟರು’ಎಂದು ಹೇಳಿರುವುದು ವಿವಾದ ಸೃಷ್ಟಿಸುವ ಸಾಧ್ಯತೆ ಇದೆ.

ಇಂದು ವಿರೋಧ ಪಕ್ಷಗಳ ಜಂಟಿ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಧನ್‌ಕರ್‌ ಸಾರ್ವಜನಿಕವಾಗಿ ಏಕೆ ಕಾಣಿಸಿಕೊಳ್ಳುತ್ತಿಲ್ಲ? ಅವರು ಏಕೆ ಅಡಗಿಕೊಂಡಿದ್ದಾರೆ? ಎಂಬುದರ ಹಿಂದೆಯೂ ಒಂದು ದೊಡ್ಡ ಕಥೆ ಇದೆ. ಭಾರತದ ಮಾಜಿ ಉಪರಾಷ್ಟ್ರಪತಿಯೊಬ್ಬರೂ ಒಂದು ಮಾತನ್ನೀ ಆಡದ ಪರಿಸ್ಥಿತಿಯಲ್ಲಿ ಏಕಿದ್ದಾರೆ ಎಂಬುದು ಜನರಿಗೆ ತಿಳಿಯಬೇಕಿದೆ ಎಂದು ಹೇಳಿದರು.

ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಪ್ರತಿ ಮಾತಿಗೂ ಸಿಡಿಮಿಡಿಗೊಳ್ಳುತ್ತಿದ್ದ ವ್ಯಕ್ತಿ ಈಗ ಮೌನವಾಗಿದ್ದಾರೆ. ನಾವು ಯಾವ ಕಾಲಘಟ್ಟದಲ್ಲಿದ್ದೇವೆ ಎಂಬುದಕ್ಕೆ ಇದು ಸ್ಪಷ್ಟ ಉದದಾಹರಣೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ನುಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!