ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾ-ಉಕ್ರೇನ್ ಯುದ್ದ ನಿಲ್ಲಿಸಲು ಶ್ರಮಿಸುತ್ತಿದ್ದಾರೆ.
ಈ ಮಧ್ಯೆ ರಷ್ಯಾ-ಉಕ್ರೇನ್ ಕದನ ವಿರಾಮ ಒಪ್ಪಂದದ ಕುರಿತು ಭಾವುಕರಾಗಿ ಮಾತನಾಡಿರುವ ಡೊನಾಲ್ಡ್ ಟ್ರಂಪ್, ‘ಉಕ್ರೇನ್ ಶಾಂತಿ ಒಪ್ಪಂದವು ನಾನು ಸ್ವರ್ಗಕ್ಕೆ ಹೋಗುವ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ’ ಎಂದು ಹೇಳಿದ್ದಾರೆ.
‘ಉಕ್ರೇನ್ನಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲಿ ಯಶಸ್ವಿಯಾದರೆ, ನಾನು ಸ್ವರ್ಗಕ್ಕೆ ಹೋಗುವ ಸಾಧ್ಯತೆ ಹೆಚ್ಚಿರುತ್ತದೆ. ನಾನು ಮುತ್ತಿನ ದ್ವಾರಗಳ ಮೂಲಕ ಸ್ವರ್ಗವನ್ನು ತಲುಪುವ ಸಾಧ್ಯತೆಗಳು ಪ್ರಸ್ತುತ ಕಡಿಮೆ ಇದೆ’ ಎಂದು ಅಮೆರಿಕ ಅಧ್ಯಕ್ಷರು ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಟ್ರಂಪ್ ಅವರ ಈ ಹೇಳಿಕೆಯನ್ನು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಕೂಡ ಪುನರುಚ್ಚಿಸಿದ್ದು,’ಅಧ್ಯಕ್ಷರು ಈ ವಿಚಾರದಲ್ಲಿ ನಿಜವಾಗಿಯೂ ಗಂಭೀರವಾಗಿದ್ದಾರೆ. ಉಕ್ರೇನ್ನಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವರ ಪ್ರಾಥಮಿಕ ಆದ್ಯತೆಯಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.
ನೊಬೆಲ್ ಶಾಂತಿ ಪ್ರಶಸ್ತಿ ಗೆಲ್ಲುವ ಪ್ರಯತ್ನದ ಭಾಗವಾಗಿ ಉಕ್ರೇನ್ನಲ್ಲಿ ರಷ್ಯಾದ ಯುದ್ಧವನ್ನು ಕೊನೆಗೊಳಿಸಲು ಬಯಸುತ್ತೇನೆ ಎಂದು 79 ವರ್ಷದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಹೇಳಿದ್ದರು. ಇದೀಗ ಸ್ವರ್ಗಕ್ಕೆ ಹೋಗುವ ಇಚ್ಛೆಯಿಂದ ತಾವು ರಷ್ಯಾ-ಉಕ್ರೇನ್ ನಡುವೆ ಶಾಂತಿ ಒಪ್ಪಂದ ಮಾಡಿಸಲು ಪ್ರಯತ್ನಿಸುತ್ತಿರುವುದಾಗಿ ಅವರು ಪ್ರತಿಪಾದಿಸಿದ್ದಾರೆ.