ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು.

ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮೇಲ್ಮನೆಯಲ್ಲಿ ಮಂಡಿಸಿದರು. ಅಲ್ಪ ಚರ್ಚೆ ಬಳಿಕ ಅನುಮೋದನೆ ನೀಡಲಾಯಿತು.

ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಶಿವಕುಮಾರ್ ಅವರು, ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಭವಿಷ್ಯದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎಂಬ ಉದ್ದೇಶದಿಂದ ಈ ತಿದ್ದುಪಡಿಯಲ್ಲಿ ಜಿಬಿಎ ಪಾಲಿಕೆಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಸ್ಪಷ್ಟನೆ ನೀಡಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!