ಹೊಸದಿಗಂತ ಡಿಜಿಟಲ್ ಡೆಸ್ಕ್:
ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನವಾದ ಬೆನ್ನಲ್ಲೇ ಇದೀಗ ಯೂಟ್ಯೂಬರ್ ಸಮೀರ್ ಎಂಬಾತನ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ.
ಧರ್ಮಸ್ಥಳ ಠಾಣೆ ಪೊಲೀಸರು ಈಗಾಗಲೇ ಬೆಂಗಳೂರಿನಲ್ಲಿದ್ದು, ಬನ್ನೇರುಘಟ್ಟ ಸಮೀಪದ ಆತನ ನಿವಾಸಕ್ಕೆ ಬೆಂಗಳೂರು ಪೊಲೀಸರ ನೆರವಿನೊಂದಿಗೆ ತೆರಳಿದರೂ ಆತ ಮಾತ್ರ ಮನೆಯಲ್ಲಿ ಲಭ್ಯವಾಗಿಲ್ಲ. ಇದೀಗ ಪೊಲೀಸರು ಮನೆಯನ್ನು ಸುತ್ತುವರೆದಿದ್ದಾರೆ. ಯಾವುದೇ ಕ್ಷಣದಲ್ಲಿ ಸಮೀರ್ ಬಂಧನವಾಗುವ ಸಾಧ್ಯತೆ ದಟ್ಟವಾಗಿದೆ. ಸಮೀರ್ ಮನೆಯಲ್ಲಿ ಪತ್ತೆಯಾಗದ ಹಿನ್ನೆಲೆಯಲ್ಲಿ ಸರ್ಚ್ ವಾರೆಂಟ್ ಹೊರಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.
ಧರ್ಮಸ್ಥಳ ಘಟನೆ ಕುರಿತಂತೆ ಸಮೀರ್ ಮಾಡಿರುವ ವಿಡಿಯೋಗಳ ಕುರಿತು ರಾಜ್ಯದ ಹಲವು ಕಡೆಗಳಲ್ಲಿ ದೂರುಗಳು ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ.