ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ನವಾಡ ಜಿಲ್ಲೆಯಲ್ಲಿ ನಡೆದ ಮತ ಅಧಿಕಾರ ಯಾತ್ರೆಯ ವೇಳೆ ಪೊಲೀಸ್ ಕಾನ್‌ಸ್ಟೆಬಲ್‌ಗೆ ಡಿಕ್ಕಿ ಹೊಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಾಹನದ ಚಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ನವಾಡಾ ಎಸ್ಪಿ ಅಭಿನವ್ ಧಿಮಾನ್ ಗುರುವಾರ ತಿಳಿಸಿದ್ದಾರೆ.
ಮಂಗಳವಾರ ಭಗತ್ ಸಿಂಗ್ ಚೌಕ್ ಮೂಲಕ ಯಾತ್ರೆಯು ಹಾದು ಹೋಗುತ್ತಿದ್ದಾಗ ರಾಹುಲ್ ಗಾಂಧಿ ಅವರ ವಾಹನದ ಮುಂದೆ ಪೊಲೀಸ್ ಕಾನ್‌ಸ್ಟೆಬಲ್ ಬಿದ್ದಿದ್ದರು.ಈ ಸಂಬಂಧ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.