2026ರ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ, ಏಕಾಂಗಿ ಹೋರಾಟ: ವಿಜಯ್

ಹೊಸದಿಗಂತ ಡಿಜಿಟಲ್ ಡೆಸ್ಕ್:

2026ರ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಟ-ರಾಜಕಾರಣಿ ವಿಜಯ್ ಹೇಳಿದ್ದಾರೆ.

ಇಂದು ಮಧುರೈ ಜಿಲ್ಲೆಯ ಪರಪತಿಯಲ್ಲಿ ನಡೆದ ಪಕ್ಷದ ಎರಡನೇ ರಾಜ್ಯಮಟ್ಟದ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಟಿವಿಕೆ ಮುಖ್ಯಸ್ಥ ವಿಜಯ್, ತಮಿಳುನಾಡು ರಾಜಕೀಯದ ಮೂರು ಪ್ರಮುಖ ಪಕ್ಷಗಳಾದ ಡಿಎಂಕೆ, ಎಐಎಡಿಎಂಕೆ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿಯನ್ನು ತಮ್ಮ ಪಕ್ಷದ ಸೈದ್ಧಾಂತಿಕ ಎದುರಾಳಿ ಎಂದು ಬಿಂಬಿಸಿದ ಟಿವಿಕೆ ನಾಯಕ, ಅದು ತಮಿಳುನಾಡಿನ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿದೆ ಮತ್ತು ಆರ್‌ಎಸ್‌ಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು.

ತಮಿಳುನಾಡಿನಲ್ಲಿ 2026ರ ಚುನಾವಣೆಯಲ್ಲಿ ಡಿಎಂಕೆ ಮತ್ತು ತಮಿಳಗ ವೆಟ್ರಿ ಕಳಗಂ(ಟಿವಿಕೆ) ನಡುವೆ ನೇರ ಹೋರಾಟ ನಡೆಯಲಿದೆ ಎಂದು ಹೇಳಿದರು.

ಇದೇ ವೇಳೆ ಆಡಳಿತರೂಢ ಡಿಎಂಕೆ ವಿರುದ್ಧವೂ ವಾಗ್ದಾಳಿ ನಡೆಸಿದ ವಿಜಯ್, ‘ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮಹಿಳೆಯರು, ರೈತರು ಮತ್ತು ಮೀನುಗಾರರಿಗೆ ದ್ರೋಹ ಮಾಡಿದ್ದಾರೆ’ ಎಂದು ಆರೋಪಿಸಿದರು.

ಟಿವಿಕೆ ತಮಿಳುನಾಡಿನ ಎಲ್ಲಾ 234 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ವಿಜಯ್ ಘೋಷಿಸಿದರು. ಇಡೀ ರಾಜ್ಯಾದ್ಯಂತ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೀಳಿಸುವ ಮೂಲಕ, ಟಿವಿಕೆಯ ಹೋರಾಟ ಕೆಲವು ಪ್ರದೇಶಗಳಿಗೆ ಸೀಮಿತವಾಗಿಲ್ಲ. ರಾಜ್ಯಾದ್ಯಂತ ಹೋರಾಟ ನಡೆಯಲಿದೆ ಮತ್ತು ಇದು ಪರಿವರ್ತನೆಯ ಗುರಿ ಹೊಂದಿದೆ ಎಂದು ಒತ್ತಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!