ಬೀದಿ ನಾಯಿಗಳ ಸ್ಥಳಾಂತರಕ್ಕೆ ಎಂಸಿಡಿ ಅಧಿಸೂಚನೆ: ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರ ಸಂಬಂಧ ದೆಹಲಿ ಮಹಾನಗರ ಪಾಲಿಕೆ ಹೊರಡಿಸಿದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

ಸುಪ್ರೀಂ ಕೋರ್ಟ್ ಆದೇಶಗಳನ್ನು ಕಾಯ್ದಿರಿಸಿದ್ದರೂ, ಎಂಸಿಡಿ ಅಧಿಸೂಚನೆ ಹೊರಡಿಸಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಇದೀಗ ನ್ಯಾಯಮೂರ್ತಿಗಳಾದ ಜೆಕೆ ಮಹೇಶ್ವರಿ ಮತ್ತು ವಿಜಯ್ ಬಿಷ್ಣೋಯ್ ಅವರಿದ್ದ ಪೀಠವು ತುರ್ತು ವಿಚಾರಣೆಯನ್ನು ನಡೆಸಲು ನಿರಾಕರಿಸಿದೆ.

ದೆಹಲಿ-ಎನ್‌ಸಿಆರ್‌ ಸುತ್ತಮುತ್ತಲಿನಲ್ಲಿ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಆಗಸ್ಟ್ 11 ರಂದು ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು.

ಈ ನಿರ್ದೇಶನಗಳಿಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಲಾದ ಮಧ್ಯಂತರ ಅರ್ಜಿಯ ಮೇಲಿನ ಆದೇಶವನ್ನು ಕಾಯ್ದಿರಿಸಿದ್ದ ಸುಪ್ರೀಂ, ಬೀದಿ ನಾಯಿಗಳ ಸಂಪೂರ್ಣ ಸಮಸ್ಯೆಗೆ ಸ್ಥಳೀಯ ಅಧಿಕಾರಿಗಳ ‘ನಿಷ್ಕ್ರಿಯತೆ’ಯೇ ಕಾರಣ ಎಂದು ಆಗಸ್ಟ್ 14 ರಂದು ಹೇಳಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!