ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಯನ್ನು ಐದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
ಈ ಕುರಿತು ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 109(1), 132 ಮತ್ತು 221ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಬುಧವಾರವೇ (ಆ.20) ಆರೋಪಿಯನ್ನು ಬಂಧಿಸಲಾಗಿದೆ. ಗುರುವಾರ (ಆ.21) ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಅವರಿಗೆ `ಝೆಡ್’ ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಿದೆ. ಗುಪ್ತಾ ಅವರ ಅಧಿಕೃತ ನಿವಾಸದಲ್ಲಿ ಅರೆಸೈನಿಕ ಪಡೆಯ ವಿಐಪಿ ಸೆಕ್ಯೂರಿಟಿ ಗ್ರೂಪ್‌ನ ಭದ್ರತೆ ಒದಗಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ದೆಹಲಿ ಮುಖ್ಯಮಂತ್ರಿಯ ಭದ್ರತೆಯ ಹೊಣೆಯನ್ನು ಕೇಂದ್ರ ಮೀಸಲು ಪೊಲೀಸ್ ಪಡೆ ವಹಿಸಿಕೊಂಡಿದೆ ಎಂದು ಮೂಲಗಳು ಹೇಳಿವೆ.