ಹೊಸದಿಗಂತ ಡಿಜಿಟಲ್ ಡೆಸ್ಕ್:
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ರಿಲಯನ್ಸ್ ಎಡಿಎ ಗ್ರೂಪ್ ಮುಖ್ಯಸ್ಥ ಅನಿಲ್ ಅಂಬಾನಿ ಅವರ ತಾಯಿ ಕೋಕಿಲಾಬೆನ್ ಅಂಬಾನಿ ಗುರುವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುರುವಾರ ರಾತ್ರಿ ಅವರ ಆರೋಗ್ಯ ಗಂಭೀರವಾಗಿದ್ದರಿಂದ, ತುರ್ತು ಪರಿಸ್ಥಿತಿಯಲ್ಲಿ ಅವರನ್ನು ಮನೆಯಿಂದ ಏರ್ಲಿಫ್ಟ್ ಮಾಡಲಾಗಿತ್ತು. ಪ್ರಸ್ತುತ ಎಚ್ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅವರ ಆರೋಗ್ಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಅಂಬಾನಿ ಕುಟುಂಬವು ಅವರ ಆರೋಗ್ಯದ ಬಗ್ಗೆ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲವಾದರೂ, ವರದಿಗಳ ಪ್ರಕಾರ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.