ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಯಕತ್ವ ಎಂಬುದು ಕೇವಲ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದಕ್ಕೆ ಸೀಮಿತವಾಗಿಲ್ಲ. ಬದಲಿಗೆ ತನ್ನಲ್ಲಿರುವ ನವೀನ ಆಲೋಚನೆಗಳನ್ನು ಜನರಿಗೆ ಅತ್ಯಂತ ಪರಿಣಾಮಕಾರಿಯಾಗಿ ತಲುಪಿಸುವ ಕಲೆ ಅದಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮದ ಎರಡನೇ ಆವೃತ್ತಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಮೋದಿ, ಯುವಜನತೆಗೆ ನಾಯಕತ್ವದ ಪಾಠಗಳನ್ನು ಬೋಧಿಸಿದರು. ನಾಯಕನಾಗಲು ಬೇಕಾದ ಮನಸ್ಥಿತಿ ಮತ್ತು ಗುಣಲಕ್ಷಣಗಳ ಬಗ್ಗೆ ವಿದ್ಯಾರ್ಥಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ, ಈ ಕೆಳಗಿನ ಪ್ರಮುಖ ಅಂಶಗಳನ್ನು ಒತ್ತಿ ಹೇಳಿದರು:
ಒಬ್ಬ ನಾಯಕನಿಗೆ ತನ್ನ ವಿಚಾರಗಳನ್ನು ಸ್ಪಷ್ಟವಾಗಿ ಮತ್ತು ಇತರರಿಗೆ ಅರ್ಥವಾಗುವಂತೆ ವಿವರಿಸುವ ಕಲೆ ಕರಗತವಾಗಿರಬೇಕು. ಆಲೋಚನೆಗಳಲ್ಲಿ ಸ್ಪಷ್ಟತೆ ಇದ್ದಾಗ ಮಾತ್ರ ಅದು ಜನರನ್ನು ತಲುಪಲು ಸಾಧ್ಯ.
ರಾಜಕೀಯ ಅಖಾಡ ಪ್ರವೇಶಿಸುವುದು ಅಥವಾ ಮತ ಗಳಿಸುವುದು ಮಾತ್ರವೇ ನಾಯಕತ್ವವಲ್ಲ. ಸಮಾಜದ ಹಿತದೃಷ್ಟಿಯಿಂದ ಕೆಲಸ ಮಾಡುವ ಮತ್ತು ಇತರರನ್ನು ಪ್ರೇರೇಪಿಸುವ ಗುಣ ಅತೀ ಮುಖ್ಯ.
ಇದನ್ನೂ ಓದಿ:
ಆಲೋಚನೆಗಳನ್ನು ಕೇವಲ ಮಂಡಿಸುವುದಲ್ಲ, ಅವುಗಳ ಮೂಲಕ ಎದುರಿಗಿರುವವರ ಮೇಲೆ ಸಕಾರಾತ್ಮಕ ಪ್ರಭಾವ ಬೀರುವ ಸಾಮರ್ಥ್ಯ ನಾಯಕನಲ್ಲಿರಬೇಕು.
ವಿದ್ಯಾರ್ಥಿ ಜೀವನದಲ್ಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಭವಿಷ್ಯದ ಬಲಿಷ್ಠ ಭಾರತದ ನಿರ್ಮಾಣಕ್ಕೆ ಸಹಕಾರಿ ಎಂಬ ಸಂದೇಶವನ್ನು ಪ್ರಧಾನಿ ಈ ಸಂದರ್ಭದಲ್ಲಿ ನೀಡಿದರು.



