ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಸಿವಿಲ್ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ, ನಗರ ಸಿವಿಲ್ ನ್ಯಾಯಾಲಯದ ಇ-ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ.
ಹಲಸೂರು ಗೇಟ್ ಪೊಲೀಸರು ಮತ್ತು ಶ್ವಾನದಳವು ಕೋರ್ಟ್ ಆವರಣವನ್ನು ಪರಿಶೀಲಿಸಿದ್ದಾರೆ. ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಹಿಂದೆ ಬೇರೆ ಕಡೆಗಳಿಗೆ ಬಂದಿದ್ದ ಬೆದರಿಕೆ ಸಂದೇಶದಂತೆ ನ್ಯಾಯಾಲಯಕ್ಕೆ ಬೆದರಿಕೆ ಸಂದೇಶ ಬಂದಿದೆ ಎಂದು ಪ್ರಾರ್ಥಮಿಕ ತನಿಖೆಯಿಂದ ತಿಳಿದುಬಂದಿದೆ.