ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಕೇಸಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ವಿರುದ್ಧದ 3ನೇ ಕೇಸಲ್ಲಿ ದೋಷಾರೋಪವನ್ನು ಕೋರ್ಟ್ ನಿಗದಿ ಪಡಿಸಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರದ ಮನೆಕೆಲಸದ ಮಹಿಳೆ ಮೇಲೆ ಅತ್ಯಾಚಾರ ಕೇಸಲ್ಲಿ 3ನೇ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ದೋಷಾರೋಪ ನಿಗದಿ ಪಡಿಸಿದೆ.
ಸಾಕ್ಷ್ಯ ವಿಚಾರಣೆ ಸೆಪ್ಟೆಂಬರ್ 11ರಂದು ಕೋರ್ಟ್ ನಿಗದಿ ಪಡಿಸಿದೆ.