ಲುಂಗಿ ಎನ್‌ಗಿಡಿ ಮಾರಕ ಬೌಲಿಂಗ್: ಆಸ್ಟ್ರೇಲಿಯಾ ವಿರುದ್ಧ ಆಫ್ರಿಕಾಕ್ಕೆ ಗೆಲುವಿನ ಖುಷಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತವರಿನಲ್ಲಿ ಹೀನಾಯ ಸೋಲು ಎದುರಿಸಿದೆ.

ಮ್ಯಾಥ್ಯೂ ಬ್ರೀಟ್ಜ್ಕೆ (88 ರನ್‌) ಅರ್ಧಶತಕ ಹಾಗೂ ಲುಂಗಿ ಎನ್ಗಿಡಿ (42 ಕ್ಕೆ 5) ಅವರ ಮಾರಕ ಬೌಲಿಂಗ್‌ ದಾಳಿಯ ಸಹಾಯದಿಂದ ದಕ್ಷಿಣ ಆಫ್ರಿಕಾ ತಂಡ, ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 84 ರನ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಏಡೆನ್‌ ಮಾರ್ಕ್ರಮ್‌ ಅವರ ನಾಯಕತ್ವದ ಹರಿಣ ಪಡೆ ( ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಲ್ಲಿ ವಶ ಪಡಿಸಿಕೊಂಡಿತು.

ಮೊದಲು ಬ್ಯಾಟ್‌ ಮಾಡಿದ್ದ ದಕ್ಷಿಣ ಆಫ್ರಿಕಾ ತಂಡ, ಮ್ಯಾಥ್ಯೂ ಬ್ರೀಟ್ಜ್ಕೆ ಹಾಗೂ ಟ್ರಿಸ್ಟನ್‌ ಸ್ಟಬ್ಸ್‌ ಅವರ ಅರ್ಧಶತಕಗಳ ಬಲದಿಂದ 49.1 ಓವರ್‌ಗಳಿಗೆ 277 ರನ್‌ಗಳಿಗೆ ಆಲ್‌ಔಟ್‌ ಆಯಿತು. ಆ ಮೂಲಕ ಎದುರಾಳಿ ಆಸ್ಟ್ರೇಲಿಯಾ ತಂಡಕ್ಕೆ 278 ರನ್‌ಗಳ ಗುರಿಯನ್ನು ನೀಡಿತು.

ಬಳಿಕ ಗುರಿ ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡ, ಲುಂಗಿ ಎನ್ಗಿಡಿ ಅವರ ಮಾರಕ ಬೌಲಿಂಗ್‌ ದಾಳಿಗೆ ನಲುಗಿ 37.4 ಓವರ್‌ಗಳಿಗೆ 193 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!