ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂದಿನ ನಾಳೆಯಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.