ಇಂದಿನಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಾರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಶನಿವಾರದಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಲಿದೆ.

ಸಮೀಕ್ಷೆ ವೇಳೆ ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ಸಹಕರಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಅಧ್ಯಕ್ಷ ಮಧುಸೂಧನ್ ಆರ್ ನಾಯಕ್ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯನ್ನು ಗಮನದಲ್ಲಿಟ್ಟುಕೊಂಡು, ಅಗತ್ಯ ಕ್ರಮಗಳನ್ನು ವೇಗದಿಂದ ಹಾಗೂ ಶ್ರದ್ಧಾಪೂರ್ವಕವಾಗಿ ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ.

ಮೊದಲ ಹಂತದಲ್ಲಿ, ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸವು, ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಅದು ರಾಜ್ಯದಾದ್ಯಂತ ಎಲ್ಲ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ.

2ನೇ ಹಂತದಲ್ಲಿ ಸಮೀಕ್ಷೆಯ ಕಾರ್ಯವನ್ನು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುತ್ತದೆ. ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ ಸೆ.22ರಿಂದ ಅ.7ರ ವರೆಗೆ ನಡೆಸಲು ಗುರಿಯಾಗಿಟ್ಟುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!