ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಶಹಜಹಾನ್ಪುರ ಪೊಲೀಸ್ ಠಾಣೆ ಪ್ರದೇಶದ ದನಿಯಾವಾನ್-ಹಿಲ್ಸಾ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವಿಗೀಡಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಸಂತ್ರಸ್ತರೆಲ್ಲರೂ ನಳಂದ ಜಿಲ್ಲೆಯ ಹಿಲ್ಸಾ ಪೊಲೀಸ್ ಠಾಣೆ ವ್ಯಾಪ್ತಿಯ ರೆಡ್ಡಿ ಮಾಲಾಮಾ ಗ್ರಾಮದ ನಿವಾಸಿಗಳಾಗಿದ್ದು, ಅವರು ತ್ರಿವೇಣಿ ಸಂಗಮದಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಫತುಹಾಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಕಾರ, ಬೆಳಗ್ಗೆ 6.45ರ ಸುಮಾರಿಗೆ ಆಟೋರಿಕ್ಷಾ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಎಂಟು ಜನರು ಪ್ರಾಣ ಕಳೆದುಕೊಂಡಿದ್ದು, ಗಾಯಾಳುಗಳು ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಸ್ಥಳೀಯ ಪೊಲೀಸರು, ಸಂಚಾರ ಅಧಿಕಾರಿಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಅಪಘಾತದ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ತಿಳಿಸಿದ್ದಾರೆ. ವರದಿಗಳ ಪ್ರಕಾರ, ಅಪಘಾತದಲ್ಲಿ ಐದು ಜನರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಪಿಎಂಸಿಎಚ್ (ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆ) ಗೆ ದಾಖಲಿಸಲಾಗಿದೆ.