ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿ: ಎಷ್ಟನೇ ಸ್ಥಾನದಲ್ಲಿದ್ದಾರೆ ಸಿಎಂ ಸಿದ್ದರಾಮಯ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಮೂರನೇ ಸ್ಥಾನದಲ್ಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು 51 ಕೋಟಿ ರೂ. ಆಸ್ತಿ ಹೊಂದುವ ಮೂಲಕ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ದೇಶಾದ್ಯಂತ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 30 ಪ್ರಸ್ತುತ ಮುಖ್ಯಮಂತ್ರಿಗಳು ಸಲ್ಲಿಸಿರುವ ಪ್ರಮಾಣಪತ್ರಗಳನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವಿಶ್ಲೇಷಿಸಿ ಈ ಮಾಹಿತಿಯನ್ನು ನೀಡಿದೆ. ವಿಶ್ಲೇಷಣೆಯ ಪ್ರಕಾರ, ಮಣಿಪುರವನ್ನು ಹೊರತುಪಡಿಸಿ ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 30 ಮುಖ್ಯಮಂತ್ರಿಗಳ ಸರಾಸರಿ ಆಸ್ತಿ 54.42 ಕೋಟಿ ರೂ.ಗಳಷ್ಟಿದೆ ಎಂದು ತಿಳಿದುಬಂದಿದೆ.

ಆಂಧ್ರಪ್ರದೇಶದ ಸಿಎಂ ನಾರಾ ಚಂದ್ರಬಾಬು ನಾಯ್ಡು ಅವರು ಒಟ್ಟು 931 ಕೋಟಿ ರೂ. ಮೌಲ್ಯದ ಆಸ್ತಿ ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ಅರುಣಾಚಲ ಪ್ರದೇಶದ ಸಿಎಂ ಪೆಮಾ ಖಂಡು ಅವರು 332 ಕೋಟಿ ರೂ.ಗೂ ಹೆಚ್ಚು ಆಸ್ತಿ ಹೊಂದುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 51 ಕೋಟಿ ರೂ. ಮೌಲ್ಯದ ಆಸ್ತಿ ಹೊಂದುವ ಮೂಲಕ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 1.18 ಕೋಟಿ ರೂ., ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ 55.24 ಲಕ್ಷ ರೂ. ಗೂ ಹೆಚ್ಚು ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 15.38 ಲಕ್ಷ ರೂ.ಗೂ ಹೆಚ್ಚು ಆಸ್ತಿ ಹೊಂದುವ ಮೂಲಕ ಅತಿ ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿಗಳಾಗಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ (1.46 ಕೋಟಿ ರೂ.), ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ (1.54 ಕೋಟಿ ರೂ.), ಬಿಹಾರದ ನಿತೀಶ್ ಕುಮಾರ್ (1.64 ಕೋಟಿ ರೂ.), ಪಂಜಾಬ್‌ನ ಭಗವಂತ್ ಮಾನ್ (1.97 ಕೋಟಿ ರೂ.), ಒಡಿಶಾದ ಮೋಹನ್ ಚರಣ್ ಮಾಝಿ (1.97 ಕೋಟಿ ರೂ.) ಮತ್ತು ಛತ್ತೀಸ್‌ಗಢದ ವಿಷ್ಣು ದೇವ್ ಸಾಯಿ (3.80 ಕೋಟಿ ರೂ.) ಕಡಿಮೆ ಆಸ್ತಿ ಹೊಂದಿರುವ ಇತರ ಸಿಎಂಗಳಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!