ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪದಡಿ ಸಾಕ್ಷಿ ದೂರುದಾರನಾಗಿದ್ದ ‘ಮಾಸ್ಕ್ಮ್ಯಾನ್’ ಚಿನ್ನಯ್ಯನ ಬಂಧನವನ್ನು ಗೃಹಸಚಿವ ಜಿ. ಪರಮೇಶ್ವರ್ ಖಚಿತಪಡಿಸಿದ್ದು, ಈ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿದ್ದಾರೆ.
ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಜಾತ ಭಟ್ ವಿಚಾರ ಕೂಡ ಈಗ ತನಿಖೆಯಲ್ಲಿದೆ. ಹಾಗಾಗಿ ತನಿಖೆಯ ವರದಿ ಬರುವವರೆಗೆ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ.
ಬಿಜೆಪಿಯವರು ಅನೇಕ ರೀತಿಯ ಹೇಳಿಕೆ ನೀಡಬಹುದು. ಈ ಹೇಳಿಕೆಗಳ ಆಧಾರದಲ್ಲಿ ತನಿಖೆ ಮಾಡಲು ಆಗಲ್ಲ. ಎಸ್ಐಟಿ ತನ್ನ ಅಂತಿಮ ವರದಿ ಸಲ್ಲಿಸುವವರಿಗೆ ಏನು ಹೇಳಲು ಆಗಲ್ಲ ಎಂದರು. ಮಾಸ್ಕ್ ಮ್ಯಾನ್ ಈಗ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ. ತನಿಖೆ ನಡೆಯುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ, ಅಧಿಕಾರಿಗಳು ತನಿಖೆ ಮುಂದುವರಿಸುತ್ತಾರೆ. ಈ ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಯನ್ನು ಎಸ್ಐಟಿ ಅಧಿಕಾರಿಗಳಿಂದ ಪಡೆಯುತ್ತೇನೆ. ಜೊತೆಗೆ ಇದರ ಹಿಂದೆ ಯಾವ ಜಾಲ ಇದೆ ಅನ್ನುವುದನ್ನು ಪತ್ತೆ ಮಾಡಲಾಗುವುದು ಎಂದು ಹೇಳಿದ್ದಾರೆ.