ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಜಾಮೀನು ಅರ್ಜಿ ವಿಚಾರಣೆಯನ್ನು ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ವಿಚಾರಣೆ ನಡೆಸಿದರು. ದೂರುದಾರ ಪರ ವಕೀಲ ಶಂಭು ಶರ್ಮ ತಿಮರೋಡಿ ಪರ ವಾದ ಮಂಡಿಸಿದರು. ಇದಕ್ಕೂ ಮುನ್ನ 2 ಗಂಟೆಗಳ ಅವಧಿಗೆ ತಿಮರೋಡಿಯನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದರು.