ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಎಪಿಎಂಸಿ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ನಿರ್ದೇಶನ ನೀಡಿದ್ದಾರೆ.
ನಾಲ್ಕು ಕಂದಾಯ ವಿಭಾಗಗಳ ಎಪಿಎಂಸಿ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ನಿಗದಿತ ಕಾಲಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸದ ಅಧಿಕಾರಿಗಳ ವರ್ತನೆಗೆ ಬೇಸರ ವ್ಯಕ್ತಪಡಿಸಿದರು.
ಮೂಲ ಸೌಕರ್ಯ ನಿರ್ಮಾಣ ಮತ್ತು ಕೋಲ್ಡ್ ಸ್ಟೋರೇಜ್ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಒಂದು ವಾರದಲ್ಲಿ ಮತ್ತೆ ಸಭೆ ಕರೆಯಲಿದ್ದು, ಇದುವರೆಗೆ ನಬಾರ್ಡ್, ಐಆರ್‌ಡಿಎಫ್ ನಿಂದ ಎಷ್ಟು ನೆರವು ಲಭ್ಯವಾಗಿದೆ. ಈ ನೆರವು ಮತ್ತು ಎಪಿಎಂಸಿ ಅನುದಾನದಲ್ಲಿ ಯಾವ ಯಾವ ಯೋಜನೆಗಳನ್ನು ಕೈಗೊಳ್ಳಲಾಗಿದೆ.