ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾರೆ. ಹಾಗಿದ್ದರೂ ಕೂಡ ‘ದಿ ಡೆವಿಲ್’ ಸಿನಿಮಾದ ಕೆಲಸಗಳನ್ನು ಮುಂದುವರಿಸಲು ಚಿತ್ರತಂಡ ತೀರ್ಮಾನಿಸಿದೆ. ಪ್ರಚಾರದ ಮೊದಲ ಹಂತವಾಗಿ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡನ್ನು ಬಿಡುಗಡೆ ಮಾಡಲಾಗಿದೆ.
ಈ ಹಾಡಿನ ಬಗ್ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಮೊದಲೇ ಈ ಸಾಂಗ್ ರಿಲೀಸ್ ಆಗಿರಬೇಕಿತ್ತು. ಆದರೆ ದರ್ಶನ್ಗೆ ನೀಡಿದ್ದ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಹಾಡಿನ ಬಿಡುಗಡೆಯನ್ನು ಮುಂದೂಡಲಾಗಿತ್ತು. ಆದರೆ ಈಗ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
ಬೇಸರದ ನಡುವೆಯೂ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡನ್ನು ಫ್ಯಾನ್ಸ್ ಸೆಲೆಬ್ರೇಟ್ ಮಾಡುತ್ತಿದ್ದಾರೆ. ಟೈಟಲ್ ಕಾರಣದಿಂದಲೇ ಈ ಹಾಡಿನ ಬಗ್ಗೆ ಅಭಿಮಾನಿಗಳಲ್ಲಿ ಕ್ರೇಜ್ ಹೆಚ್ಚಾಗಿತ್ತು. ಹಾಡು ಹೇಗಿರಬಹುದು ಎಂಬ ಕೌತುಕ ಬಹಳ ಇತ್ತು. ಎಲ್ಲದಕ್ಕೂ ಈಗ ಉತ್ತರ ಸಿಕ್ಕಿದೆ.