ಹೌತಿ ಬಂಡುಕೋರರನ್ನು ಗುರಿಯಾಗಿಸಿ ಯೆಮೆನ್ ರಾಜಧಾನಿ ಸನಾ ಮೇಲೆ ಇಸ್ರೇಲ್‌ ಯಿಂದ ಭೀಕರ ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಇಸ್ರೇಲ್‌ ವಾಯು ಸೇನೆಯು ಇರಾನ್‌ ಬೆಂಬಲಿತ ಹೌತಿ ಬಂಡುಕೋರರನ್ನು ಗುರಿಯಾಗಿಸಿಕೊಂಡು ಯೆಮೆನ್ ರಾಜಧಾನಿ ಸನಾ ಸೇರಿದಂತೆ ಹಲವಾರು ಪ್ರದೇಶಗಳ ಮೇಲೆ ದಾಳಿ ನಡೆಸಿದೆ.

ಇತ್ತೀಚೆಗೆ ಹೌತಿ ಬಂಡುಕೋರರು ಇಸ್ರೇಲ್‌ನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದ್ದರು. ಅದಕ್ಕೆ ಪ್ರತಿಯಾಗಿ ಇಸ್ರೇಲ್‌ ಈ ದಾಳಿ ನಡೆಸಿದೆ.

ವಿದ್ಯುತ್ ಕೇಂದ್ರ, ಅನಿಲ ಕೇಂದ್ರ ಸೇರಿದಂತೆ ಸನಾ ರಾಜಧಾನಿಯಾದ್ಯಂತ ಅನೇಕ ಪ್ರದೇಶಗಳ ಮೇಲೆ ದಾಳಿ ನಡೆದಿದೆ ಎಂದು ಹೌತಿ ಮಾಧ್ಯಮ ಕಚೇರಿ ತಿಳಿಸಿದೆ.

ಶುಕ್ರವಾರ ಇಸ್ರೇಲ್‌ ಅತಿದೊಡ್ಡ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ಹೌತಿಗಳು ದಾಳಿ ನಡೆಸಿದ್ದರು. ಈ ಕ್ಷಿಪಣಿಗಳನ್ನು ಇಸ್ರೇಲ್‌ ಆಕಾಶದಲ್ಲೇ ಹೊಡೆದು ಹಾಕಿತ್ತು. ಇದರಿಂದಾಗಿ ಯಾವುದೇ ಹಾನಿಗಳಾಗಿರಲಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!