ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಮೂರು ವರ್ಷಗಳಿಂದ ರಷ್ಯಾದ ಭೀಕರ ದಾಳಿ ಎದುರಿಸುತ್ತಿರುವ ಉಕ್ರೇನ್, ತನ್ನ 34ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದಿನಾಚರಣೆಯನ್ನು ಆಚರಿಸಿಕೊಂಡಿದ್ದು, ಈ ಕ್ಷಣ ರಷ್ಯಾದ ಪ್ರಮುಖ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಡ್ರೋನ್ ದಾಳಿ ಮಾಡಿದೆ.
ರಷ್ಯಾದ ಪಶ್ಚಿಮ ಕುರ್ಸ್ಕ್ ಪ್ರದೇಶದ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಉಕ್ರೇನ್ ಡ್ರೋನ್ ದಾಳಿ ನಡೆಸಿದೆ ಎಂದು ಖುದ್ದು ರಷ್ಯಾದ ಮಿಲಿಟರಿ ಆರೋಪಿಸಿದೆ.
ಹಲವಾರು ಪರಮಾಣು ವಿದ್ಯುತ್ ಮತ್ತು ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡು, ಉಕ್ರೇನ್ ರಾತ್ರಿಯಿಡೀ ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾದ ಹಿರಿಯ ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ. ಪರಮಾಣು ಸ್ಥಾವರದಲ್ಲಿನ ಬೆಂಕಿಯನ್ನು ತ್ವರಿತವಾಗಿ ನಂದಿಸಲಾಗಿದೆ ಎಂದು ಸ್ಪಷ್ಟಪಡಿಸಿರುವ ಅಧಿಕಾರಿಗಳು, ಈ ದಾಳಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಡ್ರೋನ್ ದಾಳಿಯಿಂದಾಗಿ ಟ್ರಾನ್ಸ್ಫಾರ್ಮರ್ಗೆ ಹಾನಿಯನ್ನುಂಟಾಗಿದೆಯಾದರೂ, ವಿಕಿರಣ ಮಟ್ಟಗಳು ಸಾಮಾನ್ಯ ವ್ಯಾಪ್ತಿಯಲ್ಲಿ ಉಳಿದಿವೆ ಎಂದು ರಷ್ಯನ್ ಮಿಲಿಟರಿ ತಿಳಿಸಿದೆ.