ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರಿ ನಿರೀಕ್ಷೆ ಮೂಡಿಸಿದ್ದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಆಗಸ್ಟ್ 24ರಂದು ಬಿಡುಗಡೆ ಆಯಿತು. ನಟ ದರ್ಶನ್ ಅವರ ಅಭಿಮಾನಿಗಳು ‘ದಿ ಡೆವಿಲ್’ ಸಿನಿಮಾದ ಈ ಹಾಡಿನ ಮೇಲೆ ತುಂಬಾ ಭರವಸೆ ಇಟ್ಟುಕೊಂಡಿದ್ದರು. ಇದೀಗ ಅದೇ ರೀತಿ ದರ್ಶನ್ ಫ್ಯಾನ್ಸ್ ಮತ್ತೆ ಮತ್ತೆ ಈ ಹಾಡನ್ನು ನೋಡುತ್ತಿದ್ದಾರೆ. ‘ಸರೆಗಮ ಕನ್ನಡ’ ಯೂಟ್ಯೂಬ್ ಚಾನೆಲ್ ಮೂಲಕ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ ಆದ 24 ಗಂಟೆ ಕಳೆಯುವುದರಲ್ಲಿ ಒಂದು ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.
ಪ್ರಕಾಶ್ ವೀರ್ ಅವರು ‘ದಿ ಡೆವಿಲ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರ ಸಂಗೀತ ಸಂಯೋಜನೆ ಆದ್ದರಿಂದ ಹಾಡುಗಳ ಮೇಲೆ ಜನರಿಗೆ ಇರುವ ನಿರೀಕ್ಷೆ ಅಪಾರ. ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಕೇಳಿ ದರ್ಶನ್ ಅಭಿಮಾನಿಗಳಿಗೆ ಇಷ್ಟ ಆಗಿದೆ. ವಿಶೇಷವಾಗಿ ಈ ಹಾಡಿನಲ್ಲಿ ದರ್ಶನ್ ಅವರ ಗೆಟಪ್ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.