ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟೆಂಬರ್ 1 ಮತ್ತು 2ರಂದು ಕರ್ನಾಟಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರವಾಸ ಕೈಗೊಳ್ಳಲಿದ್ದು, ಮೈಸೂರು ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವದಲ್ಲಿಯೂ ಭಾಗವಹಿಸಲಿದ್ದಾರೆ.
ಈ ವೇಳೆ ಪ್ರಮೋದಾದೇವಿ ಒಡೆಯರ್ ಅವರ ಆಹ್ವಾನದ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಅರಮನೆಗೆ ಸಹ ಭೇಟಿ ನೀಡಲಿದ್ದಾರೆ. ಹೀಗಾಗಿ ಸೆಪ್ಟೆಂಬರ್ 1 ಹಾಗೂ 2ರಂದು ಅರಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (AIISH) ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಬರುತ್ತಿದ್ದಾರೆ. ಈ ಸಂಸ್ಥೆಯು ವಾಕ್ ಮತ್ತು ಶ್ರವಣ ದೋಷಗಳಿರುವವರಿಗೆ ಚಿಕಿತ್ಸೆ ಮತ್ತು ತರಬೇತಿಯನ್ನು ನೀಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1 ರಂದು ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಇದು ಮೈಸೂರಿನ ಇತಿಹಾಸದಲ್ಲಿ ಒಂದು ಸ್ಮರಣೀಯ ಕ್ಷಣವಾಗಿದ್ದು, ರಾಷ್ಟ್ರಪತಿಯವರ ಭೇಟಿಗಾಗಿ ಭರದ ಸಿದ್ಧತೆಗಳು ನಡೆದಿವೆ. ಈ ಭೇಟಿಯು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ಪತ್ರದ ಮೇರೆಗೆ ನಡೆಯುತ್ತಿರುವುದು ವಿಶೇಷ. ಈ ಹಿನ್ನೆಲೆಯಲ್ಲಿ ಸೆ.1 ರಿಂದ ಸೆ.2ರ ಮಧ್ಯಾಹ್ನದವರೆಗೆ ಮೈಸೂರು ಅರಮನೆಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ.
ರಾಷ್ಟ್ರಪತಿಯವರ ಭೇಟಿಯ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 1 ರಂದು ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಅಲ್ಲದೆ, ಭದ್ರತಾ ದೃಷ್ಟಿಯಿಂದ ಸೆಪ್ಟೆಂಬರ್ 2 ರ ಮಧ್ಯಾಹ್ನದವರೆಗೂ ಪ್ರವೇಶ ನಿಷೇಧ ಮುಂದುವರಿಯಲಿದೆ. ಪ್ರವಾಸಿಗರು ಮತ್ತು ಸ್ಥಳೀಯರು ಈ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ಸಹಕರಿಸುವಂತೆ ಅರಮನೆ ಮಂಡಳಿ ಮನವಿ ಮಾಡಿದೆ.