ಗಾಜಾದ ಆಸ್ಪತ್ರೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 15 ಜನರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಗಾಜಾದ ಆಸ್ಪತ್ರೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಂದು ದಕ್ಷಿಣ ಗಾಜಾದ ನಾಸರ್ ಆಸ್ಪತ್ರೆಯ ನಾಲ್ಕನೇ ಮಹಡಿಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆದಿದ್ದು, 4 ಪತ್ರಕರ್ತರು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ .

ಇತ್ತೀಚಿನ ದಾಳಿಯ ಕುರಿತು ಇಸ್ರೇಲ್ ಸೇನೆ ಇನ್ನೂ ಪ್ರತಿಕ್ರಿಯಿಸಿಲ್ಲ. ಹಮಾಸ್ ಉಗ್ರಗಾಮಿಗಳ ಇರುವಿಕೆಯನ್ನು ಉಲ್ಲೇಖಿಸಿ, ಆಸ್ಪತ್ರೆಗಳ ಬಳಿ ಅಥವಾ ಒಳಗೆ ಟಾರ್ಗೆಟ್​​ಗಳನ್ನು ಹೊಡೆದಿರುವುದನ್ನು ಅದು ಈ ಹಿಂದೆ ಒಪ್ಪಿಕೊಂಡಿದ್ದರೂ, ಈ ನಿರ್ದಿಷ್ಟ ಘಟನೆಯನ್ನು ಅದು ಅಧಿಕೃತವಾಗಿ ಉಲ್ಲೇಖಿಸಿಲ್ಲ.

ಗಾಜಾ ಆರೋಗ್ಯ ಸಚಿವಾಲಯದ ಪ್ರಕಾರ, ಸಂಘರ್ಷ ಪ್ರಾರಂಭವಾದಾಗಿನಿಂದ 62,686ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ. ಈ ದಾಳಿಯಲ್ಲಿ ಕೊಲ್ಲಲ್ಪಟ್ಟವರಲ್ಲಿ ಅರ್ಧದಷ್ಟು ಮಹಿಳೆಯರು ಮತ್ತು ಮಕ್ಕಳು ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!