ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ 10ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ.
ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿತ್ತು. ಅದರ ಬೆನ್ನಲ್ಲೇ ಮೇಘಸ್ಫೋಟ ಸಂಭವಿಸಿದೆ.
ಈ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ಪ್ರತಿಕೂಲ ಹವಾಮಾನದ ಹಿನ್ನೆಲೆ ಜಮ್ಮುವಿನಾದ್ಯಂತ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜೊತೆಗೆ ಜಮ್ಮುವಿನಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು, ಜನರು ಭೂಕುಸಿತ ಪೀಡಿತ ಪ್ರದೇಶಗಳಿಂದ ದೂರವಿರಲು ಸೂಚಿಸಲಾಗಿದೆ. ತಾವಿ ನದಿ ಸೇರಿದಂತೆ ಅನೇಕ ನದಿಗಳು ಮತ್ತು ಹೊಳೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ರಾತ್ರಿ ವೇಳೆ ನೀರಿನ ಪ್ರಮಾಣದಲ್ಲಿ ಗಮನಾರ್ಹ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.