ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಆರಂಭಕ್ಕೂ ಟೀಮ್ ಇಂಡಿಯಾದಿಂದ ಹೊರಬಿದ್ದ ಯುವ ವೇಗಿ ಹರ್ಷಿತ್ ರಾಣಾ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿ ಮೈದಾನ ತೊರೆದಿದ್ದ ರಾಣಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋ ಹಂಚಿಕೊಂಡಿದ್ದು, ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, ಬೇಗನೇ ಚೇತರಿಸಿಕೊಂಡು ಮತ್ತೆ ತಂಡಕ್ಕೆ ಮರಳುವುದಾಗಿ ತಿಳಿಸಿದ್ದಾರೆ.

ಪಂದ್ಯದ ಸಮಯದಲ್ಲಿ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದ ರಾಣಾ ಅವರನ್ನು ಟಿ20 ವಿಶ್ವಕಪ್ನಿಂದ ಹೊರಗಿಡಲಾಗಿತ್ತು.



