February 9, 2026
Monday, February 9, 2026
spot_img

ಸಿಕ್ಕ ಅವಕಾಶಕ್ಕೆ ಬೆಸ್ಟ್ ಆಟ: ವಿಶ್ವಕಪ್‌ ಟೂರ್ನಿಯಲ್ಲಿ ದಾಖಲೆ ಬರೆದ ಸ್ಕಾಟ್ಲೆಂಡ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್ ಹಾಗೂ ಇಟಲಿ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟಿಂಗ್‌ ಮಾಡಿದ ಸ್ಕಾಟ್ಲೆಂಡ್ 20 ಓವರ್​ಗಳಲ್ಲಿ ಬರೋಬ್ಬರಿ 207 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಟಲಿ 134 ರನ್​ಗಳಿಗೆ ಆಲೌಟ್ ಆಗುವ ಮೂಲಕ 73 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಬಾರಿಯ ಟಿ20 ವಿಶ್ವಕಪ್​ಗೆ ಸ್ಕಾಟ್ಲೆಂಡ್ ತಂಡ ಅರ್ಹತೆ ಪಡೆದಿರಲಿಲ್ಲ. ಆದರೆ ಬಾಂಗ್ಲಾದೇಶ ಟಿ20 ವಿಶ್ವಕಪ್​ನಿಂದ ತನ್ನ ಹೆಸರನ್ನು ಹಿಂಪಡೆದ ಕಾರಣ ಸ್ಕಾಟ್ಲೆಂಡ್ ತಂಡಕ್ಕೆ ಟಿ20 ವಿಶ್ವಕಪ್​ನಲ್ಲಿ ಆಡುವ ಅವಕಾಶ ಸಿಕ್ಕಿತು. ಅದರಂತೆ ಸಿ ಗುಂಪಿನಲ್ಲಿ ಸ್ಥಾನ ಪಡೆದಿರುವ ಸ್ಕಾಟ್ಲೆಂಡ್ ತನ್ನ ಮೊದಲ ಪಂದ್ಯದಲ್ಲಿ ದಾಖಲೆಯ ರನ್ ಗಳಿಸಿದೆ.ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿ ಅಸೋಸಿಯೇಟ್ ತಂಡದ ಅತ್ಯಧಿಕ ಸ್ಕೋರ್ ಆಗಿದೆ.

ಸ್ಕಾಟ್ಲೆಂಡ್ ತಂಡಕ್ಕೆ ಉತ್ತಮ ಜೊತೆಯಾಟ ಸಿಕ್ಕಿತು. ಆರಂಭಿಕರಾದ ಜಾರ್ಜ್ ಮುನ್ಸೆ ಮತ್ತು ಮೈಕೆಲ್ ಜೋನ್ಸ್ 14 ಓವರ್​ಗಳ ಒಳಗೆ ತಂಡವನ್ನು 126 ರನ್​ಗಳಿಗೆ ಕೊಂಡೊಯ್ದರು. ಈ ಹಂತದಲ್ಲಿ ಮುನ್ಸೆ 54 ಎಸೆತಗಳಲ್ಲಿ 13 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 84 ರನ್ ಬಾರಿಸಿ ಔಟಾದರು. ಆ ಬಳಿಕ ಜೋನ್ಸ್ ಜೊತೆಯಾದ ಬ್ರಾಂಡನ್ ಮೆಕ್‌ಮುಲ್ಲೆನ್ ಉತ್ತಮ ಜೊತೆಯಾಟ ಕಟ್ಟಿದರು. ಜೋನ್ಸ್ 37 ರನ್ ಬಾರಿಸಿ ಔಟಾದರೆ, ಮೆಕ್‌ಮುಲ್ಲೆನ್ ಕೇವಲ 18 ಎಸೆತಗಳಲ್ಲಿ 4 ಸಿಕ್ಸರ್ ಸಹಿತ ಅಜೇಯ 41 ರನ್​ಗಳ ಇನ್ನಿಂಗ್ಸ್ ಆಡಿದರು. ಕೊನೆಯಲ್ಲಿ ಮೈಕೆಲ್ ಲೀಸ್ಕ್ 22 ರನ್ ಬಾರಿಸಿ ತಂಡವನ್ನು 200 ರನ್​ಗಳ ಗಡಿ ದಾಟಿಸಿದರು. ಇದುವರೆಗೆ 7 ಪಂದ್ಯಗಳು ನಡೆದಿದ್ದು, ಈ ಹಿಂದಿನ ಅತ್ಯಧಿಕ ಸ್ಕೋರ್ 184 ರನ್ ಆಗಿತ್ತು. ಅದು ನೇಪಾಳ ವಿರುದ್ಧ ಇಂಗ್ಲೆಂಡ್ ಕಲೆಹಾಕಿದ್ದ ಮೊತ್ತವಾಗಿತ್ತು.

ಇನ್ನು 207 ರನ್​ಗಳ ಗುರಿ ಬೆನ್ನಟ್ಟಿದ ಇಟಲಿ16.4 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು ಇಟಲಿ 134 ರನ್​ಗಳಿಗೆ ಆಲೌಟ್ ಆಯಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !