Monday, October 13, 2025

ತವರಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಸಿಎಂ ಯೋಗಿ ಆದಿತ್ಯನಾಥ್ ಸನ್ಮಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಮತ್ತು ಪರೀಕ್ಷಾ ಪೈಲಟ್ ಶುಭಾಂಶು ಶುಕ್ಲಾ ಅವರಿಗೆ ಉತ್ತರ ಪ್ರದೇಶದ ಲಖನೌನಲ್ಲಿ (Lucknow) ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಬಳಿಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೃತ್ಪೂರ್ವಕವಾಗಿ ಸ್ವಾಗತಿಸಿ, ಸನ್ಮಾನಿಸಿದರು.

ಬಾಹ್ಯಾಕಾಶ ಪರಿಶೋಧನೆಯಲ್ಲಿ ಶುಕ್ಲಾ ಅವರ ಅಸಾಧಾರಣ ಸಾಧನೆ ಲಕ್ನೋ ಮತ್ತು ಭಾರತ ದೇಶ ಎರಡಕ್ಕೂ ಹೆಮ್ಮೆಯ ಕ್ಷಣವಾಗಿತ್ತು. ಭಾರತದ ಬೆಳೆಯುತ್ತಿರುವ ಬಾಹ್ಯಾಕಾಶ ಉಪಸ್ಥಿತಿಗೆ ಶುಭಾಂಶು ಅವರ ಕೊಡುಗೆಯನ್ನು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಶ್ಲಾಘಿಸಿದರು.

error: Content is protected !!