February 10, 2026
Tuesday, February 10, 2026
spot_img

SHOCKING | ಅತಿಹೆಚ್ಚು ಭದ್ರತೆ ಇರುವ ವಿಧಾನಸೌಧದಲ್ಲೇ ಕಳ್ಳತನ, ಸಚಿವರ ಕೊಠಡಿಯಿಂದಲೇ ಬ್ಯಾಗ್‌ ಮಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅತಿಹೆಚ್ಚಿನ ಭದ್ರತೆ ಇರುವ ಸ್ಥಳಗಳಲ್ಲಿ ಒಂದಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಕಚೇರಿಯಲ್ಲಿದ್ದ ಬ್ಯಾಗ್‌ ಕಳುವಾಗಿದೆ.

ಈ ಬ್ಯಾಗ್‌ನಲ್ಲಿ ಬರೋಬ್ಬರಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇತ್ತು. ಕಳ್ಳತನದ ಆರೋಪದ ಮೇಲೆ ಡಿ ಗ್ರೂಪ್‌ ನೌಕರನೊಬ್ಬನನ್ನು ಬಂಧಿಸಲಾಗಿದೆ.

ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಸಹಿತ ಕಚೇರಿಯಲ್ಲೇ ಮರೆತು ಹೊರಟಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.

ಗಾಬರಿಗೊಂಡ ನವೀನ್ ತಕ್ಷಣ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ವೇಳೆ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ಹೊತ್ತುಕೊಂಡು ಹೋಗಿರುವುದು ಪತ್ತೆಯಾಗಿದೆ. ತಕ್ಷಣವೇ ಡಿ ಗ್ರೂಪ್‌ ನೌಕರರನ್ನು ಬಂಧಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !