February 10, 2026
Tuesday, February 10, 2026
spot_img

3 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾ ಬಲೆಗೆ ಬಿದ್ದ ಬೆಸ್ಕಾಂ ಇಂಜಿನಿಯರ್ 

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲಂಚ ಸ್ವೀಕರಿಸುತ್ತಿದ್ದಾಗ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಒಬ್ಬರು ಲೋಕಾಯುಕ್ತ ಪೊಲೀಸರಿಗೆ ರೆಡ್-ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಇಂದಿರಾನಗರದ ಬೆಸ್ಕಾಂನ ಇ-11 ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್ ಕೆ ವಿ ಅವರನ್ನು ನಗರ ವಿಭಾಗದ ಲೋಕಾಯುಕ್ತ ಪೊಲೀಸರು ದೂರುದಾರರಿಂದ 3 ಲಕ್ಷ ರೂ. ಲಂಚ ಪಡೆಯುವಾಗ ಬಂಧನಕ್ಕೊಳಪಡಿಸಿದ್ದಾರೆ.

ಲೋಕಾಯುಕ್ತ ಪೊಲೀಸರ ಅಧಿಕೃತ ಪ್ರಕಟಣೆಯ ಪ್ರಕಾರ, ನಗರದ ನಿವಾಸಿ ವಿದ್ಯುತ್ ಗುತ್ತಿಗೆದಾರ ದಿಲೀಪ್ ಎಸ್.ಎನ್. ನೀಡಿದ ದೂರಿನ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್‌ ದೇವರಾಜ್ ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಎಸ್‌.ಬಿ.ಪಾಟೀಲ್‌, ಕೇಶವಮೂರ್ತಿ ಮತ್ತು ರಾಜಶೇಖರಯ್ಯ ಅವರ ತಂಡವು ಕಾರ್ಯಾಚರಣೆ ನಡೆಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !