ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾರ್ವಜನಿಕರಿಗೆ ವೇಗವಾದ ಹಾಗೂ ಪಾರದರ್ಶಕ ಸೇವೆ ಒದಗಿಸಲು ಕಂದಾಯ ಇಲಾಖೆಯನ್ನು ಸಂಪೂರ್ಣ ಡಿಜಿಟಲ್ ವ್ಯವಸ್ಥೆಗೆ ತರುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯವರ್ತಿಗಳ ಪ್ರಭಾವವನ್ನು ಕಡಿಮೆ ಮಾಡುವುದೂ ಈ ಕ್ರಮದ ಪ್ರಮುಖ ಉದ್ದೇಶ ಎಂದು ಹೇಳಿದರು.
ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ತಹಶೀಲ್ದಾರ್ ಕಚೇರಿಗಳಲ್ಲಿ ಸಾವಿರಾರು ಅರ್ಜಿಗಳು ಬಾಕಿ ಉಳಿದಿದ್ದವು. ವಿಶೇಷ ಅಭಿಯಾನಗಳ ಮೂಲಕ ಬಹುತೇಕ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ಈಗ ಅಲ್ಪ ಸಂಖ್ಯೆಯ ಅರ್ಜಿಗಳು ಮಾತ್ರ ಉಳಿದಿವೆ ಎಂದು ಸಚಿವರು ಮಾಹಿತಿ ನೀಡಿದರು. ಐದು ವರ್ಷಕ್ಕಿಂತ ಹೆಚ್ಚು ಕಾಲ ಬಾಕಿ ಉಳಿದಿದ್ದ ಪ್ರಕರಣಗಳನ್ನೂ ಹಂತ ಹಂತವಾಗಿ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ:
‘ನನ್ನ ಭೂಮಿ’ ಅಭಿಯಾನದಿಂದ ರೈತರ ಭೂ ಹಕ್ಕು ಮತ್ತು RTC ಸಮಸ್ಯೆಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದ್ದು, ಲಕ್ಷಾಂತರ ಪ್ರಕರಣಗಳಲ್ಲಿ ಸರ್ವೇ ಹಾಗೂ ತಿದ್ದುಪಡಿ ಪ್ರಕ್ರಿಯೆ ಮುಂದುವರಿದಿದೆ. ತಾಂಡಾ ಮತ್ತು ಹಟ್ಟಿ ಪ್ರದೇಶಗಳ ಜನರಿಗೆ ಹಕ್ಕು ಪತ್ರ ವಿತರಣೆ ಕೂಡ ವೇಗವಾಗಿ ನಡೆಯುತ್ತಿದೆ ಎಂದು ತಿಳಿಸಿದರು.



