February 10, 2026
Tuesday, February 10, 2026
spot_img

ಕೆನಡಾದಲ್ಲಿ ಮೃತಪಟ್ಟ ಕನ್ನಡಿಗನ ಮೃತದೇಹ ತರಲು ಎಲ್ಲಾ ಪ್ರಯತ್ನ ನಡೀತಿದೆ: ಜಿ. ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟ ನೆಲಮಂಗಲ ಮೂಲದ ಚಂದನ್ ಕುಮಾರ್ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ಹೇಳಿದ ಗೃಹ ಸಚಿವ ಜಿ. ಪರಮೇಶ್ವರ್, ಪಾರ್ಥೀವ ಶರೀರವನ್ನು ಶೀಘ್ರವಾಗಿ ಭಾರತಕ್ಕೆ ತರಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಚಂದನ್ ಕುಮಾರ್ ನಿವೃತ್ತ ಶಿಕ್ಷಕ ನಂದಕುಮಾರ್ ಅವರ ಏಕೈಕ ಪುತ್ರರಾಗಿದ್ದು, ಕೆನಡಾದಲ್ಲಿ ಪ್ರಾಜೆಕ್ಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಅಕಾಲಿಕ ಸಾವಿನಿಂದ ಕುಟುಂಬದವರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಹತ್ಯೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಮೃತದೇಹವನ್ನು ಭಾರತಕ್ಕೆ ತರಲು ರಾಜ್ಯ ಪೊಲೀಸ್ ಇಲಾಖೆ ಮೂಲಕ ಕೇಂದ್ರ ವಿದೇಶಾಂಗ ಸಚಿವಾಲಯದ ಸಹಕಾರ ಕೇಳಲಾಗಿದೆ. ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದು ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು. ಜೊತೆಗೆ, ಈ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೆನಡಾ ಸರ್ಕಾರವನ್ನು ಮನವಿ ಮಾಡಲಾಗುವುದು ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !