ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರೌಡಿ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಹೀಗಾಗಿ ಬಂಧನ ಭೀತಿ ಎದುರಾಗಿದೆ.
ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಐದನೇ ಆರೋಪಿಯಾಗಿರುವ ಕೆ.ಆರ್.ಪುರ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ ಮಾಡಿದೆ.
ಬೆಂಗಳೂರಿನ ಹಲಸೂರು ಕೆರೆ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಕೊಲೆ ಆರೋಪದ ಮೇರೆಗೆ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಬೈರತಿ ಬಸವರಾಜ್ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.



