February 10, 2026
Tuesday, February 10, 2026
spot_img

ಬೆಳ್ತಂಗಡಿ ವಿದ್ಯಾರ್ಥಿನಿ ಕಿಡ್ನ್ಯಾಪ್​​ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್: ಅಸಲಿಗೆ ನಡೆದಿದ್ದು ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಳ್ತಂಗಡಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ ವೇಳೆ ದೂರಿನಲ್ಲಿ ಉಲ್ಲೇಖಿಸಲಾದ ಯಾವುದೇ ವಾಹನ ಪತ್ತೆಯಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿ ಫೆ.9ರಂದು ಬೆಳಗ್ಗೆ 8:30ರ ಸುಮಾರಿಗೆ 16 ವರ್ಷದ ಕಾಲೇಜು ವಿದ್ಯಾರ್ಥಿನಿ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ಮೂವರು ಅಪಹರಿಸಲು ಯತ್ನಿಸಿದ್ದಾರೆ ಎಂದು ದೂರಲಾಗಿತ್ತು. ಈ ವೇಳೆ ದುಷ್ಕರ್ಮಿಗಳು ತನ್ನ ಕೈಗೆ ಚೂರಿಯಿಂದ ಚುಚ್ಚಿ ಪರಾರಿಯಾದರು ಎಂದು ವಿದ್ಯಾರ್ಥಿನಿ ಪೊಲೀಸ್ ಪೊಲೀಸ್ ದೂರಿನಲ್ಲಿ ತಿಳಿಸಿದ್ದಳು. ಕೈಗೆ ಗಾಯವಾಗಿದ್ದರಿಂದ ಬಾಲಕಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಸಂಬಂಧ ತನಿಖೆಗೆ ಇಳಿದ ಪೊಲೀಸರು, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದು, ಈ ವೇಳೆ ಬಾಲಕಿ ಹೇಳಿದಂತೆ ಯಾವ ಕಾರು ಓಡಾಡಿರುವುದು ಪತ್ತೆಯಾಗಿಲ್ಲ. ಈ ವೇಳೆ ಪೊಲೀಸರು ಬಾಲಕಿಯ ಹೇಳಿಕೆಯನ್ನು ಮತ್ತೊಮ್ಮೆ ದಾಖಲಿಸಿದ್ದು, ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ.

ತನಗೆ ಕಾಲೇಜಿಗೆ ಹೋಗಲು ಇಷ್ಟ ಇಲ್ಲದ ಕಾರಣ ಕೈಗೆ ಬ್ಲೆಡ್ ನಿಂದ ಇರಿದು ಅಪಹರಣದ ಸುಳ್ಳು ಸುದ್ದಿ ಹಬ್ಬಿಸಿದೆ ಎಂದು ಒಪ್ಪಿಕೊಂಡಿದ್ದಾಳೆ.

ಸದ್ಯ ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಆಕೆಯ ಹಿತದೃಷ್ಠಿಯಿಂದ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರಿಂದ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು ಹಾಗೂ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !