April 15, 2026
Wednesday, April 15, 2026
spot_img

ಖಾಸಗಿ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪವಾಡ ಸದೃಶ ಪಾರು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿಯ ಕೊಕ್ಕರ ಕಲ್ ಬಳಿ ಖಾಸಗಿ ತಡೆರಹಿತ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಉಂಟಾಗಿದ್ದು ಬಸ್ಸಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ಪಾರಾಗಿದ್ದಾರೆ .

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟಿಎಂಟಿ ಕೊಹಿನೂರು ಹೆಸರಿನ ತಡೆರಹಿತ ಬಸ್ ಮುಲ್ಕಿ ಸಮೀಪ ಕೊಕ್ಕರಕಲ್ ಸಮೀಪಿಸುತ್ತಿದ್ದಂತೆ ಬಸ್ಸಿನಲ್ಲಿ ಆಕಸ್ಮಿಕ ಹೊಗೆ ಸಹಿತ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕನು ಸ್ಥಳೀಯರ ನೆರವಿನೊಂದಿಗೆ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ರಕ್ಷಿಸಲಾಗಿದೆ

ಬಸ್ಸಿನ ಟರ್ಬೊ ಹಿಡಿದು ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ ಎಂದು ಚಾಲಕ ತಿಳಿಸಿದ್ದಾನೆ. ಸ್ಥಳಕ್ಕೆ ಹೆಜಮಾಡಿ ಟೋಲ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು ಬಸ್ಸನ್ನು ಸ್ಥಳದಿಂದ ತೆರವುಗೊಳಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !