July 21, 2026
Tuesday, July 21, 2026
spot_img

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಎ1 ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎ1 ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಲುಕ್‌ಔಟ್ ನೋಟಿಸ್ ಜಾರಿ ಹಿನ್ನೆಲೆ ದೆಹಲಿ ಏರ್‌ಪೋರ್ಟ್‌ನಲ್ಲಿ ಜಗ್ಗ ಲಾಕ್ ಆಗಿದ್ದಾನೆ. ಜಗ್ಗನನ್ನು ವಶಕ್ಕೆ ಪಡೆದು ಸಿಐಡಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಸದ್ಯ ಜಗ್ಗನನ್ನು ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು ಆತನನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಬರುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಗ್ಗ ಸೇರಿ ಈವರೆಗೆ 21 ಆರೋಪಿಗಳನ್ನು ಬಂಧಿಸಲಾಗಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಜಗದೀಶ್ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿತ್ತು. ಕೆಲವು ವರ್ಷಗಳ ಹಿಂದೆ ಆತನನ್ನು ರೌಡಿಪಟ್ಟಿಯಿಂದ ಕೈ ಬಿಡಲಾಗಿತ್ತು. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜಗದೀಶ್ ಪ್ರಮುಖ ಆರೋಪಿಯಾಗಿದ್ದಾನೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !