February 11, 2026
Wednesday, February 11, 2026
spot_img

ಅಭಿಷೇಕ್ ಶರ್ಮಾ ಔಟ್, ಸಂಜು ಸ್ಯಾಮ್ಸನ್ ಇನ್: ಡಿನ್ನರ್ ಪಾರ್ಟಿಯಲ್ಲಿ ಏನಾಯ್ತು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ತಂಡದ ಯುವ ಹಾಗೂ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿರುವ ಅವರು, ಫೆಬ್ರವರಿ 12ರಂದು ನಮೀಬಿಯ ವಿರುದ್ಧ ನಡೆಯಲಿರುವ ಪಂದ್ಯದಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ಯುಎಸ್​ಎ ವಿರುದ್ಧದ ಪಂದ್ಯ ಮುಗಿಸಿ ದೆಹಲಿಗೆ ಆಗಮಿಸಿದ್ದ ಟೀಮ್ ಇಂಡಿಯಾ ಸದಸ್ಯರಿಗೆ ಕೋಚ್ ಗೌತಮ್ ಗಂಭೀರ್ ತಮ್ಮ ನಿವಾಸದಲ್ಲಿ ಭೋಜನಾ ಕೂಟ ಏರ್ಪಡಿಸಿದ್ದರು. ಈ ಡಿನ್ನರ್ ಪಾರ್ಟಿಯಲ್ಲಿ ಭಾಗವಹಿಸಿದ್ದ ಅಭಿಷೇಕ್ ಶರ್ಮಾ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ವರದಿಗಳ ಪ್ರಕಾರ ಅವರು ಹೊಟ್ಟೆಯ ಸೋಂಕಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಅಭಿಷೇಕ್ ಶರ್ಮಾ ಅಲಭ್ಯತೆಯಿಂದಾಗಿ ಭಾರತ ತಂಡದ ಆರಂಭಿಕ ಕ್ರಮಾಂಕದಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ವೈಫಲ್ಯ ಅನುಭವಿಸಿದ್ದ ಸಂಜು ಸ್ಯಾಮ್ಸನ್ ಅವರಿಗೆ ಈಗ ಮತ್ತೆ ಆರಂಭಿಕನಾಗಿ ಕಣಕ್ಕಿಳಿಯುವ ಅವಕಾಶ ಸಿಗುವ ಸಾಧ್ಯತೆಯಿದೆ. ನಮೀಬಿಯ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಇನಿಂಗ್ಸ್ ಆರಂಭಿಸಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ:

ಸದ್ಯ ಚಿಕಿತ್ಸೆ ಪಡೆಯುತ್ತಿರುವ ಅಭಿಷೇಕ್ ಶರ್ಮಾ ಅವರು ಮಂಗಳವಾರದವರೆಗೆ ಆಸ್ಪತ್ರೆಯಲ್ಲೇ ಇರಲಿದ್ದಾರೆ. ನಮೀಬಿಯ ವಿರುದ್ಧದ ಪಂದ್ಯ ತಪ್ಪಿಸಿಕೊಂಡರೂ, ತದನಂತರ ನಡೆಯಲಿರುವ ಪಾಕಿಸ್ತಾನ ಮತ್ತು ನೆದರ್​ಲೆಂಡ್ಸ್ ವಿರುದ್ಧದ ಹೈವೋಲ್ಟೇಜ್ ಪಂದ್ಯಗಳ ವೇಳೆಗೆ ಅವರು ಸಂಪೂರ್ಣ ಗುಣಮುಖರಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !