February 11, 2026
Wednesday, February 11, 2026
spot_img

ಶಿಕ್ಷಣದ ಹೆಸರಿನಲ್ಲಿ ಕನ್ನಡ ಶಾಲೆಗಳಿಗೆ ಕುತ್ತು? ರಾಜ್ಯ ಸರ್ಕಾರದ ವಿರುದ್ಧ ಬೊಮ್ಮಾಯಿ ಗರಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಸರ್ಕಾರದ ‘ಪಬ್ಲಿಕ್ ಸ್ಕೂಲ್ ಮ್ಯಾಗ್ನೆಟ್’ ಯೋಜನೆಯ ಹೆಸರಿನಲ್ಲಿ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದ್ದು, ಇದು ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಬೊಮ್ಮಾಯಿ ಕಿಡಿಕಾರಿದ್ದಾರೆ. “ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ಸರ್ಕಾರ ದಿವಾಳಿಯಾಗಿದೆ. ಕನಿಷ್ಠ ಸಂಬಳ ನೀಡಲೂ ಹಣವಿಲ್ಲದ ಕಾರಣ ಶಾಲೆಗಳನ್ನು ಮುಚ್ಚುವ ತೀರ್ಮಾನಕ್ಕೆ ಬಂದಿದ್ದಾರೆ. ಈ ಕೂಡಲೇ ಮುಚ್ಚಿರುವ ಶಾಲೆಗಳನ್ನು ಪುನರಾರಂಭಿಸಬೇಕು” ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ:

ಇದೇ ವೇಳೆ ಸಂಸತ್ತಿನಲ್ಲಿ ವಿರೋಧ ಪಕ್ಷಗಳ ವರ್ತನೆಯನ್ನು ಟೀಕಿಸಿದ ಅವರು, ಕಾಂಗ್ರೆಸ್ ನಾಯಕರು “ನಗರ ನಕ್ಸಲರಂತೆ” ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಪ್ರಧಾನಮಂತ್ರಿಯವರ ಆಸನದವರೆಗೆ ಹೋಗಿ ಅಡ್ಡಿಪಡಿಸುವುದು ಸಂಸತ್ತಿನ ಇತಿಹಾಸದಲ್ಲೇ ಕಪ್ಪು ಚುಕ್ಕೆ. ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದಕ್ಕಿಂತ, ಕಲಾಪಕ್ಕೆ ತೊಂದರೆ ಕೊಡುವುದೇ ರಾಹುಲ್ ಗಾಂಧಿ ಅವರ ಅಜೆಂಡಾ ಆಗಿದೆ ಎಂದು ಬೊಮ್ಮಾಯಿ ಲೇವಡಿ ಮಾಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !