ಹೊಸದಿಗಂತ ಡಿಜಿಟಲ್ ಡೆಸ್ಕ್:
2017ರಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಕನ್ನಡ ನಟರಾದ ಸಾಧು ಕೋಕಿಲ ಮತ್ತು ಮಂಡ್ಯ ರಮೇಶ್ ವಿರುದ್ಧ ಹೊರಡಿಸಲಾಗಿದ್ದ ಸಮನ್ಸ್ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ಈ ಬಗ್ಗೆ ಸಲ್ಲಿಸಿದ ಅರ್ಜಿಯನ್ನು ವಿಚಾರಿಸಿದ ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರು, ಆರೋಪಗಳ ಬೆಂಬಲಕ್ಕೆ ಸ್ಪಷ್ಟವಾದ ಪ್ರಾಥಮಿಕ ಸಾಕ್ಷ್ಯಗಳಿಲ್ಲವೆಂದು ಹೇಳಿ ವಿಚಾರಣಾ ನ್ಯಾಯಾಲಯದಲ್ಲಿ ಮುಂದಿನ ಕ್ರಮಕ್ಕೆ ತಡೆ ನೀಡಿದರು.
ಇದನ್ನೂ ಓದಿ:
ಆರೋಪಿಗಳ ಪರವಾಗಿ ವಕೀಲ ಎಚ್.ಎಸ್. ಚಂದ್ರಮೌಳಿ ವಾದ ಮಂಡಿಸಿದರು. 2017ರ ಅಕ್ಟೋಬರ್ 20ರಂದು ಮೈಸೂರಿನ ಮಸಾಜ್ ಪಾರ್ಲರ್‌ಗೆ ಭೇಟಿ ನೀಡಿದ ವೇಳೆ ಇಬ್ಬರೂ ನಟರು ಲೈಂಗಿಕ ಕಿರುಕುಳ ನೀಡಿದರು ಎಂದು ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸರಸ್ವತಿಪುರಂ ಪೊಲೀಸರಿಗೆ ದೂರು ನೀಡಿದ್ದರು. ಆ ದೂರಿನ ಆಧಾರದ ಮೇಲೆ ಸ್ಥಳೀಯ ನ್ಯಾಯಾಲಯವು ಇಬ್ಬರಿಗೂ ಸಮನ್ಸ್ ಜಾರಿ ಮಾಡಿತ್ತು.
ಇದೀಗ ಹೈಕೋರ್ಟ್ ಮಧ್ಯಪ್ರವೇಶದಿಂದ ಪ್ರಕರಣದ ಮುಂದಿನ ವಿಚಾರಣೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.



