February 11, 2026
Wednesday, February 11, 2026
spot_img

ಸ್ಪೀಕರ್ ಕೊಠಡಿಯಲ್ಲಿ ಗಲಾಟೆ ಆರೋಪ: ಕಾಂಗ್ರೆಸ್ ಸಂಸದರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದ ರಿಜಿಜು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಸಂಸದರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಆರೋಪಿಸಿದ್ದಾರೆ.

ಸುಮಾರು 20ರಿಂದ 25 ಮಂದಿ ಕಾಂಗ್ರೆಸ್ ಸದಸ್ಯರು ಸ್ಪೀಕರ್ ಅವರ ಕೊಠಡಿಗೆ ತೆರಳಿ ಕಠಿಣವಾಗಿ ಮಾತನಾಡಿದ್ದು, ಈ ಸಂದರ್ಭದಲ್ಲಿ ಹಿರಿಯ ನಾಯಕರು ಇದ್ದರೂ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಲಿಲ್ಲ ಯಾಕೆ ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ:

ಈ ಘಟನೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ನೋವುಂಟು ಮಾಡಿದೆ ಎಂದು ಹೇಳಿದ ರಿಜಿಜು, ಸ್ಪೀಕರ್ ಸೌಮ್ಯ ಸ್ವಭಾವದವರಾಗಿರುವುದರಿಂದ ಕಠಿಣ ಕ್ರಮ ಕೈಗೊಳ್ಳಲಿಲ್ಲ ಎಂದು ತಿಳಿಸಿದರು. ಘಟನೆ ನಡೆದಾಗ ಕೆ.ಸಿ. ವೇಣುಗೋಪಾಲ್, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ನಾಯಕರು ಅಲ್ಲೇ ಇದ್ದರು ಎಂದು ಅವರು ಉಲ್ಲೇಖಿಸಿದರು.

ಇದಲ್ಲದೆ, ಸದನದಲ್ಲಿ ಮಾತನಾಡಲು ಸ್ಪೀಕರ್ ಅನುಮತಿ ಅಗತ್ಯವಿದೆ ಎಂಬ ನಿಯಮವನ್ನು ಕಾಂಗ್ರೆಸ್ ಸದಸ್ಯರು ಪಾಲಿಸಿಲ್ಲ ಎಂದು ರಿಜಿಜು ಆರೋಪಿಸಿದರು. ಯಾರೇ ಆಗಲಿ, ಪ್ರಧಾನಿ ಸಹ ಸ್ಪೀಕರ್ ಅನುಮತಿ ಪಡೆದೇ ಮಾತನಾಡಬೇಕು ಎಂಬುದನ್ನು ಅವರು ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !