October 18, 2026
Sunday, October 18, 2026
spot_img

ಮೈಸೂರು-ಮಂಗಳೂರು ‘Best’ ಬೆಂಗಳೂರು ‘Worst’: ಮಂಜು-ದೂಳಿನ ಮಿಶ್ರಣಕ್ಕೆ ಹೈರಾಣಾದ ಸಿಟಿ ಮಂದಿ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ವಾಯು ಗುಣಮಟ್ಟವು ಸ್ಥಿರವಾಗಿದ್ದರೂ, ರಾಜಧಾನಿ ಬೆಂಗಳೂರಿನಲ್ಲಿ ಮಾತ್ರ ಮಾಲಿನ್ಯದ ಮಟ್ಟ ಆತಂಕಕಾರಿಯಾಗಿ ಏರಿಕೆಯಾಗಿದೆ. ಸಮುದ್ರದ ಗಾಳಿಯ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಶುದ್ಧ ಗಾಳಿ ಇರುವುದಾಗಿ ವರದಿಯಾಗಿದೆ.

ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕವು ಇಂದು 140 ರಿಂದ 175 ರ ನಡುವೆ ದಾಖಲಾಗಿದ್ದು, ಇದನ್ನು ‘ಕಳಪೆ’ ಎಂದು ವರ್ಗೀಕರಿಸಲಾಗಿದೆ.

ಬೆಳಗಿನ ಜಾವ ಕಂಡುಬರುವ ಮಂಜಿನಿಂದಾಗಿ ಧೂಳಿನ ಕಣಗಳು ಗಾಳಿಯಲ್ಲಿ ದೀರ್ಘಕಾಲ ಉಳಿಯುತ್ತಿವೆ. ಇದರೊಂದಿಗೆ ಒಣ ಹವೆ ಮತ್ತು ಬಿಸಿಲಿನ ತಾಪವು ಧೂಳಿನ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ.

ಬೆಂಗಳೂರಿಗೆ ಹೋಲಿಸಿದರೆ ರಾಜ್ಯದ ಇತರೆ ಭಾಗಗಳಲ್ಲಿ ಪರಿಸ್ಥಿತಿ ಆಶಾದಾಯಕವಾಗಿದೆ. ಸಮುದ್ರದ ಗಾಳಿಯ ಪ್ರಭಾವದಿಂದ ಮಂಗಳೂರು ಮತ್ತು ಉಡುಪಿ ಇಲ್ಲಿ ಗಾಳಿ ಅತ್ಯಂತ ಶುದ್ಧವಾಗಿದೆ. ಮೈಸೂರು ಮತ್ತು ಚಾಮರಾಜನಗರದಲ್ಲಿ ವಾಯು ಗುಣಮಟ್ಟ ಉತ್ತಮವಾಗಿದ್ದು, ಬೆಳಗಿನ ವಾಯುವಿಹಾರ ಮತ್ತು ದೈಹಿಕ ಚಟುವಟಿಕೆಗಳಿಗೆ ಇದು ಸೂಕ್ತ ಸಮಯವಾಗಿದೆ.

Must Read