February 12, 2026
Thursday, February 12, 2026
spot_img

ಪೊಲೀಸರ ಭರ್ಜರಿ ಕಾರ್ಯಾಚರಣೆ: ಕಿಟಕಿ ಸರಳು ಮುರಿದು ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ

ಹೊಸದಿಗಂತ ಕುಮಟಾ:

ಇಲ್ಲಿನ ಮಾಸೂರು ಕ್ರಾಸ್ ಸಮೀಪದ ಪೆಟ್ರೋಲ್ ಬಂಕ್ ಕಚೇರಿಗೆ ನುಗ್ಗಿ ನಗದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕುಮಟಾ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿದೆ.

ಅಸ್ಲಂ ಮಹಮ್ಮದ್ ಹನೀಫ್ ದಂಡು (18) ಹಾಗೂ ಇನ್ನೊಬ್ಬ 17 ವರ್ಷದ ಅಪ್ರಾಪ್ತ ಬಾಲಕ ಬಂಧಿತ ಆರೋಪಿಗಳಾಗಿದ್ದಾರೆ.

ಫೆಬ್ರವರಿ 1ರ ತಡರಾತ್ರಿ ಪೆಟ್ರೋಲ್ ಬಂಕ್ ಕಚೇರಿಯ ಹಿಂಭಾಗದ ಕಿಟಕಿಯ ಸರಳುಗಳನ್ನು ಕತ್ತರಿಸಿ ಒಳನುಗ್ಗಿದ್ದ ಕಳ್ಳರು, ಲಾಕರ್ ಮುರಿದು 25 ಸಾವಿರ ರೂಪಾಯಿ ಹಣದೊಂದಿಗೆ ಪರಾರಿಯಾಗಿದ್ದರು. ಈ ಬಗ್ಗೆ ದಾಖಲಾದ ದೂರಿನ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದರು.

ವಶಪಡಿಸಿಕೊಂಡ ವಸ್ತುಗಳು:

ಕಳ್ಳತನ ಮಾಡಿದ್ದ ನಗದು ಹಣ.

ಕೃತ್ಯಕ್ಕೆ ಬಳಸಿದ್ದ ₹3 ಲಕ್ಷ ಮೌಲ್ಯದ ಎರಡು ಸುಜುಕಿ ಬರ್ಗಮನ್ ಸ್ಕೂಟರ್‌ಗಳು.

ಕಿಟಕಿ ಮತ್ತು ಲಾಕರ್ ಮುರಿಯಲು ಬಳಸಿದ್ದ ಮಾರಕಾಸ್ತ್ರಗಳು.

ಕುಮಟಾ ಇನ್ಸ್‌ಪೆಕ್ಟರ್ ಯೋಗೇಶ ಕೆ.ಎಂ ಅವರ ನೇತೃತ್ವದಲ್ಲಿ, ಪಿಎಸ್‌ಐಗಳಾದ ರವಿ ಗುಡ್ಡಿ, ಮಯೂರ ಪಟ್ಟಣಶೆಟ್ಟಿ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿದೆ. ಈ ಯಶಸ್ವಿ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಸೇರಿದಂತೆ ಉನ್ನತ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !