April 16, 2026
Thursday, April 16, 2026
spot_img

ಕರ್ನಾಟಕ ಕಾಂಗ್ರೆಸ್‌ನಲ್ಲಿ ಬದಲಾವಣೆಯ ಗಾಳಿ: ರಾಹುಲ್ ಗಾಂಧಿ ಅಂಗಳದಲ್ಲಿ ಡಿಕೆಶಿ ಭವಿಷ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕಿಚ್ಚು ಹತ್ತಿಕೊಂಡಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಂತ್ರಗಾರಿಕೆ ಚುರುಕುಗೊಳಿಸಿದ್ದಾರೆ.

ಇತ್ತೀಚೆಗೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಡಿಕೆಶಿ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಅನಿವಾರ್ಯತೆಯನ್ನು ಮನವರಿಕೆ ಮಾಡಲು ಪ್ರಯತ್ನಿಸಿದ್ದಾರೆ.

ಸೋನಿಯಾ ಗಾಂಧಿ ಅವರ ಸಂಪೂರ್ಣ ಬೆಂಬಲ ಡಿ.ಕೆ. ಶಿವಕುಮಾರ್ ಅವರಿಗಿದ್ದರೂ, ಅಂತಿಮ ನಿರ್ಧಾರ ರಾಹುಲ್ ಗಾಂಧಿ ಅವರ ಕೈಯಲ್ಲಿದೆ. 2028ರ ವಿಧಾನಸಭಾ ಚುನಾವಣೆ ಮತ್ತು 2029ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಪಕ್ಷವನ್ನು ಬಲಪಡಿಸಲು ತಮಗೆ ಅವಕಾಶ ನೀಡಬೇಕೆಂದು ಅವರು ವಾದಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಮನವೊಲಿಸುವ ಈ “ಮಿಷನ್ ಸಿಎಂ” ಈಗ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !