ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಫೋಟೊ ಎಡಿಟ್ ಮಾಡಿ ಅವಹೇಳನಾಕಾರಿ ರೀತಿಯಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸನರದ ಮಳಲಿ ಗ್ರಾಮದ ನಿವಾಸಿ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಗೆ ಫೆಬ್ರವರಿ 24, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಪೋಸ್ಟ್ನಲ್ಲೇನಿತ್ತು?
ರಾಗಾ ಮುಖದ ಅರ್ಧಭಾಗ ಹಾಗೂ ಪಾಕ್ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ಅಸಿಮ್ ಫೋಟೊ ಜತೆ ಸೇರಿಸಿದ್ದರು. ಈ ಚಿತ್ರಕ್ಕೆ ಒಂದೇ ಅಜೆಂಡಾ ಎನ್ನುವ ಶೀರ್ಷಿಕೆ ಕೊಡಲಾಗಿತ್ತು.
ಈ ಆಕ್ಷೇಪಾರ್ಹ ಪೋಸ್ಟ್ ಗಮನಿಸಿದ ಹೊಸನಗರ-ನಗರ ಪೊಲೀಸರು, ಮೇ 20, 2025 ರಂದೇ ಬಿಎನ್ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.



